ಬೆಂಗಳೂರು:ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಯಲ್ಲಿ ತೊಡಗಿದ್ದಾರೆ. ಇನ್ನೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದು, ಇವರಿಗೆ ಹಿರಿಯ ಬಿಜೆಪಿ ನಾಯಕರು ಸಾಥ್​ ನೀಡಿದ್ದಾರೆ. ಈ ವೇಳೆ ಮಾತನಾಡಿದ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ ರಾಜ್ಯ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನಗೆಳನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿದ ನಟ ಜಗ್ಗೇಶ್​, ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್​ನವರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದಾರೆ ಎಂದು ಮಾತನಾಡಲು ಶುರು ಮಾಡಿದ ನಟ ಜಗ್ಗೇಶ್​ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದಾರೆ.
ಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡುತ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಂ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀ ಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆ ಎಂದು ನಟ ಜಗ್ಗೇಶ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 13 =
Remember me
