ಹೈದರಾಬಾದ್​:ಕಳೆದ ಕೆಲವು ತಿಂಗಳ ಹಿಂದೆ ಸ್ಯಾಂಡಲ್​ವುಡ್​ ಹಾಗೂ ಟಾಲಿವುಡ್​ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಪವಿತ್ರಾ ಲೋಕೇಶ್​ ಹಾಗೂ ನರೇಶ್​ ಜೋಡಿ ಇದೀಗ ಸದ್ದಿಲ್ಲದೇ ಹೊಸ ವರ್ಷಕ್ಕೆ ಹೊಸ ಸುದ್ದಿಯೊಂದನ್ನು ನೀಡಿದೆ.
ತೆಲುಗು ಚಿತ್ರರಂಗದಲ್ಲಿ ಪೋಷಕ ನಟ ನರೇಶ್​ ಹಾಗೂ ಕನ್ನಡ, ತೆಲುಗು ಚಿತ್ರಗಳಲ್ಲಿ ಪೋಷಕ ನಟಿ ಪವಿತ್ರಾ ಲೋಕೇಶ್​ ನಡುವೆ ಸಂಬಂಧ ಇರುವುದಾಗಿ ನರೇಶ್​ ಪತ್ನಿ ರಮ್ಯಾ, ಮಾಧ್ಯಮಗಳ ಮುಂದೆ ಹೇಳಿದ್ದರು. ಇದಲ್ಲದೇ ತಮಗೆ ಪತಿಯಿಂದ ಅನ್ಯಾಯವಾಗಿದ್ದು, ನ್ಯಾಯಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ವಿಚಾರಕ್ಕೆ ಪುಷ್ಟಿ ಕೊಡುವಂತೆ ನರೇಶ್​ ಹಾಗೂ ಪವಿತ್ರಾ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ನೆಲೆಸಿದ್ದರು. ಇಷ್ಟೆಲ್ಲಾ ನಡೆದ ಮೇಲೂ ಪವಿತ್ರಾ ಲೋಕೇಶ್​ ಮಾತ್ರ ತಮ್ಮ ಹಾಗೂ ನರೇಶ್​ ನಡುವಿನ ಸಂಬಂಧದ ಬಗ್ಗೆ ಯಾವುದೇ ಮಾಹಿತಿ ಬಿಚ್ಚಿಟ್ಟಿರಲಿಲ್ಲ. ನರೇಶ್​ ಕೇವಲ ತನಗೆ ಒಬ್ಬ ಒಳ್ಳೆಯ ಗೆಳೆಯ ಎಂದೇ ವಾದಿಸಿದ್ದರು.
ಆದರೆ ಇದೀಗ ನರೇಶ್​ 2023ರ ಹೊಸ ವರ್ಷಕ್ಕೆ ಹೊಸ ಸುದ್ದಿ ಎಂಬಂತೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ನರೇಶ್​ ಕ್ಯಾಂಡಲ್​ ಲೈಟ್​ನಲ್ಲಿ ಪವಿತ್ರಾ ಲೋಕೇಶ್​ ಅವರೊಂದಿಗೆ ಕೇಕ್​ ಕತ್ತರಿಸಿ, ಪರಸ್ಪರ ತಿನ್ನಿಸಿದ್ದಾರೆ. ನಂತರ ಇಬ್ಬರೂ ಒಬ್ಬರಿಗೊಬ್ಬರು ಪರಸ್ಪರ ಚುಂಬಿಸಿದ್ದಾರೆ. 2023ರ ಹೊಸ ವರ್ಷಕ್ಕೆ ಶುಭಾಷಯ ಕೋರುತ್ತಾ, ಈ ಹೊಸ ವರ್ಷಕ್ಕೆ ನಿಮ್ಮೆಲ್ಲರ ಹಾರೈಕೆ ಬೇಕು. ಸದ್ಯದಲ್ಲೇ ನಾವಿಬ್ಬರೂ ಮದುವೆಯಾಗಲಿದ್ದೇವೆ ಎಂದು ಪವಿತ್ರಾ ಲೋಕೇಶ್​ರೊಂದಿಗಿನ ಸಂಬಂಧಕ್ಕೆ ಮುದ್ರೆ ಒತ್ತಿದ್ದಾರೆ.
New Year ✨New Beginnings 💖Need all your blessings 🙏From us to all of you#HappyNewYear❤️– Mee#PavitraNareshpic.twitter.com/JiEbWY4qTQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − two =
Remember me
