ಉಡುಪಿ:ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಆಗಮಿಸಿದ ತೆಲುಗು ಚಿತ್ರನಟ ಜೂ. ಎನ್​ಟಿಆರ್​ರನ್ನು ‘ಕಾಂತಾರ’ ಖ್ಯಾತಿಯ ನಟ ರಿಷಭ್​ ಶೆಟ್ಟಿ ಸ್ವಾಗತಿಸಿದ್ದು, ಎನ್​ಟಿಆರ್ ಅಮ್ಮನ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದಿದ್ದಾರೆ.
ಇದನ್ನೂ ಓದಿ:ನಡುರಸ್ತೆಯಲ್ಲಿ ವೃದ್ಧದಂಪತಿಯನ್ನು ಯಾಮಾರಿಸಿ ಚಿನ್ನ ಕದ್ದ ಖದೀಮ; ವಿಡಿಯೋ ನೋಡಿ ನೆಟ್ಟಿಗರು ಏನಂದ್ರು ಗೊತ್ತಾ?
ಕೃಷ್ಣ, ಮುಖ್ಯ ಪ್ರಾಣ ದೇವರ ದರ್ಶನ ಕೈಗೊಂಡ ಜೂ. ಎನ್​ಟಿಆರ್​ ಕುಟುಂಬವನ್ನು ರಿಷಬ್ ಸ್ವಾಗತಿಸಿದ್ದಾರೆ. ಈ ವೇಳೆ ಕೆಜಿಎಫ್​ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಉಪಸ್ಥಿತರಿದ್ದರು. ಕೃಷ್ಣ, ಮುಖ್ಯಪ್ರಾಣ, ಗರುಡ ದೇವರ ದರ್ಶನ ಪಡೆದ ಎನ್​ಟಿಆರ್​, ತಮ್ಮ ತಾಯಿ ಮತ್ತು ಕುಟುಂಬಸ್ಥರಿಗೆ ಒಂದಷ್ಟು ಸಮಯ ದೇವಾಲಯದಲ್ಲಿ ಕಳೆದರು.

ತಮ್ಮ ತಾಯಿ ಮೂಲತಃ ಉಡುಪಿಯವರಾದ ಕಾರಣ ಜೂ.ಎನ್​ಟಿಆರ್​ ಅವರು ಕನ್ನಡ ಭಾಷೆಯನ್ನು ಚೆನ್ನಾಗಿ ಮಾತನಾಡಲು ಹಾಗೂ ಅರ್ಥೈಸಿಕೊಳ್ಳಬಲ್ಲರು. ಈ ಹಿಂದೆ ಪುನೀತ್ ರಾಜ್​ಕುಮಾರ್​ ಅಭಿನಯದ ಚಕ್ರವ್ಯೂಹ ಚಿತ್ರದಲ್ಲಿ ‘ಗೆಳೆಯ ಗೆಳೆಯ’ ಹಾಡನ್ನು ಹಾಡಿ, ಕನ್ನಡ ಸಿನಿಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದರು. ಕನ್ನಡಿಗರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಎನ್​ಟಿಆರ್​, ರಾಷ್ಟ್ರಪ್ರಶಸ್ತಿ ಪಡೆದ ‘ಕಾಂತಾರ’ ಚಿತ್ರವನ್ನು ನೋಡಿ ಖುದ್ದಾಗಿ ರಿಷಭ್​ಗೆ ಕರೆ ಮಾಡಿ ಅಭಿನಂದನೆ, ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × two =
Remember me
