ಶಿವಮೊಗ್ಗ:18ನೇ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕರ್ನಾಟಕದ ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಹ್ಯಾಟ್ರಿಕ್​ ಹೀರೋ ಡಾ. ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಸ್ಪರ್ಧಿಸುತ್ತಿದ್ದು, ಪತ್ನಿ ಪರ ಶಿವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್​ಕುಮಾರ್​ ತಾವು ರಾಹುಲ್​ ಗಾಂಧಿ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮದುವೆಗೂ ಮುನ್ನ ಆರು ಮಂದಿ ಜೊತೆಗೆ ಸುತ್ತಾಡಿದ್ರು ಕೊಹ್ಲಿ ಪತ್ನಿ ಅನುಷ್ಕಾ
ನಾನು ರಾಹುಲ್​ ಗಾಂಧಿ ಅವರ ಫಿಟ್ನೆಸ್​ ಹಾಗೂ ಮನುಷ್ಯತ್ವಕ್ಕೆ ದೊಡ್ಡ ಅಭಿಮಾನಿ. ಏಕೆಂದರೆ ದೇಶದ ನಾಯಕರಾದವರು ಮೊದಲು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು. ರಾಹುಲ್‌ ಗಾಂಧಿ ಅವರನ್ನು ನೋಡಿದಾಗ ದೈಹಿಕವಾಗಿ ಸದೃಢತೆ ಹೊಂದಿದವರು ದೇಶವನ್ನೂ ಇದೇ ರೀತಿ ಇಟ್ಟುಕೊಳ್ಳುತ್ತಾರೆ ಅನ್ನಿಸುತ್ತದೆ. ರಾಹುಲ್‌ ಗಾಂಧಿ ಕೂಡ ಪ್ರಧಾನಿಯಾದರೆ ದೇಶವನ್ನು ಫಿಟ್‌ ಆಗಿಯೇ ಇಡುತ್ತಾರೆ.
ಕಾಂಗ್ರೆಸ್​ ಸಮಾವೇಶದಲ್ಲಿ ಭಾಗಿಯಾಗಿರುವುದು ತುಂಬಾ ಖುಷಿ ನೀಡಿದೆ. ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಮಹಾನ್​ನಾಯಕರ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ನನ್ನೊಂದಿಗೆ ನಟ ದುನಿಯಾ ವಿಜಯ್‌ ಕೂಡ ಭಾಗಿಯಾಗಿರುವುದು ಸಂತಸ ತಂದಿದೆ ಎಂದು ನಟ ಶಿವರಾಜ್​ಕುಮಾರ್​ ಹೇಳಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + 16 =
Remember me
