ಬೆಂಗಳೂರು:ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.
ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಬೇಕು, ಇದಕ್ಕಾಗಿ ನಾವು ಯಾವತ್ತೂ ಕನ್ನಡಿಗರೊಂದಿಗೆ ಇದ್ದೇವೆ ಎಂದು ಹೇಳಿಕೊಂಡಿದ್ದರು. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಕಾವೇರಿ ಪರ ಕೂಗಿಗೆ ದನಿಗೂಡಿಸಿದ್ದಾರೆ.
ಇದನ್ನೂ ಓದಿ:ಕಾವೇರಿ ವಿವಾದ: ನಟ ದರ್ಶನ್ ಮತ್ತು ಕಿಚ್ಚ ಸುದೀಪ್​​ ಟ್ವೀಟ್​
ಈಗಾಗಲೇ ಸರಿಯಾಗಿ ಮಳೆಯಾಗದೆ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿರುವ ಉಪೇಂದ್ರ, ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಮುಂದೆಂದೂ ಇಂಥ ಸಮಸ್ಯೆ ತಲೆದೋರದಂಥ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಅವರು ಆಶಿಸಿದ್ದಾರೆ.
ಇದನ್ನೂ ಓದಿ:Shiva Rajkumar Raises Voice Over Kaveri Dispute | ಕಾವೇರಿಗಾಗಿ ಧ್ವನಿ ಎತ್ತಿದ ಶಿವರಾಜ್ ಕುಮಾರ್
ಈಗಾಗಲೇ ಸರಿಯಾಗಿ ಮಳೆಯಾಗದೇ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ
— Upendra (@nimmaupendra)September 20, 2023

ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

ಮೀನು ಮಾರ್ಕೆಟ್​ನಲ್ಲಿ ಮಾತೃವಾತ್ಸಲ್ಯ ಅನಾವರಣ; ವಿದೇಶದಿಂದ ಮಗ ಮುಖಮುಚ್ಚಿಕೊಂಡು ಬಂದರೂ ಗುರುತು ಹಿಡಿದ ಅಮ್ಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 7 =
Remember me
