– ಕೆಲ ದಿನಗಳ ಹಿಂದೆ ಮನೆಗೆ ಬಂದಾಗ ಅಜ್ಜಿಯನ್ನ ನೋಡಿದ್ದೆ– ಅಜ್ಜಿಯ ಜತೆ ಒಡನಾಟ ಚೆನ್ನಾಗಿತ್ತು
ಬೆಂಗಳೂರು:ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್​​ನ ಹಿರಿಯ ಕಲಾವಿದೆ 85 ವರ್ಷದ ಲೀಲಾವತಿ ಅವರು 2 ದಿನಗಳ ಹಿಂದೆ ನಿಧನರಾಗಿದ್ದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆರವೇರಿದೆ. ಸಾಕಷ್ಟು ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿ ಬಾರದ ಲೋಕಕ್ಕೆ ನಟಿ ಲೀಲಾವತಿ ಅವರು ಹೋಗಿದ್ದಾರೆ.
ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ ಮೊಮ್ಮಗ ಯುವರಾಜ್ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಲೀಲಾವತಿ ಮೊಮ್ಮಗ ಯುವರಾಜ್ ಅಜ್ಜಿಯ ಕುರಿತಾಗಿ ಮಾತನಾಡುತ್ತಾ ಭಾವುಕರಾಗಿದ್ದಾರೆ.
ಅಜ್ಜಿಯ ಜತೆ ಒಡನಾಟ ಚೆನ್ನಾಗಿತ್ತು. ನಮ್ಮ ಅಜ್ಜಿ ಆತ್ಮಕ್ಕೆ ಶಾಂತಿ ಸಿಗಲಿ. ಕೊನೆಯದಾಗಿ ಕೆಲ ದಿನಗಳ ಹಿಂದೆ ಮನೆಗೆ ಬಂದಾಗ ಅಜ್ಜಿಯನ್ನ ನೋಡಿದ್ದೆ. ನಾನು ದೂರ ಹೋಗುವವರೆಗೆ ನನ್ನನ್ನ ನೋಡಿದ್ದರು ಎಂದು ಕಡೆಯ ಭೇಟಿಯ ಬಗ್ಗೆ ಮೊಮ್ಮಗ ಯುವರಾಜ್ ಸ್ಮರಿಸಿದ್ದಾರೆ.
ವಿನೋದ್ ರಾಜ್ ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.
ಅಪ್ಪ ಯಾರೆಂಬ ಪ್ರಶ್ನೆಗೆ ಖಡಕ್​ ಉತ್ತರ ಕೊಟ್ಟ ವಿನೋದ್​ ರಾಜ್​; ಲೀಲಾವತಿ ಕುರಿತು ಸಮಾಧಿಯಾಗಿದ್ದ ಸತ್ಯ ಬಹಿರಂಗ
ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ಬಂದ ಮೊಮ್ಮಗ, ಸೊಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
