ಮೈಸೂರು:‘ಭಜರಂಗಿ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
ವಿದ್ಯಾ ನಂದೀಶ್‌ ಮೃತ ನಟಿ.  ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು  ಕೊಲೆ ಮಾಡಿದ್ದಾನೆ.  ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಮಲಗುವ ಮುನ್ನ ಒಂದೇ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?  ಇಲ್ಲಿದೆ ಅಗತ್ಯ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eleven =
Remember me
