ಬೆಂಗಳೂರು:ಕಿರುತೆರೆ ನಟಿ ಕಾವ್ಯಾ ಗೌಡ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಾಮಮಂದಿರ ಉದ್ಘಾಟನೆಯಾದ ದಿನವೇ ಕಾವ್ಯಾ ಗೌಡ ಅವರ ಮನೆಗೆ ಸೀತೆಯ ಆಗಮನವಾಗಿದೆ. ನಮ್ಮ ಪುಟ್ಟ ಮಗುವಿನ ಆಗಮನವಾಗಿರುವ ಸುದ್ದಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ತಾಯಿ ಮಗುವ ಇಬ್ಬರೂ ಆರಾಮವಾಗಿದ್ದೇವೆ. ಈ ವಿಶೇಷ ಪ್ರಯಾಣದ ಹಾದಿಯಲ್ಲಿ ಹಾರೈಸಿದ, ಕಾಳಜಿ ವಹಿಸಿದ ಎಲ್ಲರಿಗೂ ಧನ್ಯವಾದ ಎಂದು ಕಾವ್ಯಾ ಗೌಡ ತನ್ನ ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್‌ ಹಾಕಿದ್ದಾರೆ.

2021ರ ಡಿಸೆಂಬರ್‌ 2ರಂದು ಕಾವ್ಯಾ ಗೌಡ ಮತ್ತು ಸೋಮಶೇಖರ್‌ ಜೋಡಿ ವಿವಾಹವಾಗಿದ್ದರು. ಇದೀಗ ರಾಮ ಜನ್ಮಭೂಮಿಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆಯ ದಿನದಂದೇ ಮನೆಗೆ ಹೆಣ್ಣು ಮಗುವಿನ ಆಗಮನವಾಗಿದೆ.

ಕಾವ್ಯಾ ಗೌಡ ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ರಾಧಾ ರಮಣ, ಶುಭ ವಿವಾಹ, ಗಾಂಧಾರಿ ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಕಾವ್ಯಾ ಗೌಡಾ  ಅಕ್ಕ ಭವ್ಯ ಗೌಡ ಕೂಡ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾವು ಮಗುವಿನ ನಿರೀಕ್ಷೆಯಲ್ಲಿರುವ ಮಾಹಿತಿಯನ್ನು ಇವರು ಕೂಡ ಹಂಚಿಕೊಂಡಿದ್ದರು.
ಅಕ್ಕ- ತಂಗಿ ಇಬ್ಬರು ಪ್ರೆಗ್ನೆಂಟ್​; ನಟಿ ಮನೆಯಲ್ಲಿ ಡಬಲ್ ಸಂಭ್ರಮ​

ಅಕ್ಕ- ತಂಗಿ ಇಬ್ಬರು ಪ್ರೆಗ್ನೆಂಟ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 − 1 =
Remember me
