ಬೆಂಗಳೂರು:ನಟಿ ನೀತೂ ಶೆಟ್ಟಿ ಮತ್ತೆ ಬಣ್ಣ ಹಚ್ಚಿದ್ದಾರೆ. ಅದಕ್ಕಾಗಿ ಅವರು ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ’ಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಂತ ನಟ-ನಿರ್ದೇಶಕ ರಿಷಬ್​ ಶೆಟ್ಟಿ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ- ಕಾಸರಗೋಡು; ಕೊಡುಗೆ ರಾಮಣ್ಣ ರೈ’ ಚಿತ್ರದ ಭಾಗ ಎರಡು ಮಾಡುತ್ತಿದ್ದಾರೆ, ಅದರಲ್ಲಿ ನೀತೂ ಅಭಿನಯಿಸಲಿದ್ದಾರೆ ಎಂದುಕೊಂಡರೆ ತಪ್ಪು. ಏಕೆಂದರೆ ನಟಿ ನೀತೂ ಈಗ ಬಣ್ಣ ಹಚ್ಚಿದ್ದು ಶಾಲೆಗೆ.
‘ಕನ್ನಡ ಮನಸುಗಳ ಪ್ರತಿಷ್ಠಾನ’ ಹಮ್ಮಿಕೊಂಡಿರುವ ‘ಸರಕಾರಿ ಶಾಲೆ ಉಳಿಸಿ ಅಭಿಯಾನ’ದಲ್ಲಿ ನೀತೂ ಶೆಟ್ಟಿ ಕೂಡ ಭಾಗಿಯಾಗಿದ್ದು, ಆ ಪ್ರತಿಷ್ಠಾನದ ಮೂಲಕ ಈಗಾಗಲೇ ಹತ್ತು ಶಾಲೆಗಳಿಗೆ ಬಣ್ಣ ಹಚ್ಚಿ ಆಕರ್ಷಕಗೊಳಿಸುವ, ಉತ್ತಮ ಪಡಿಸುವ ಕಾರ್ಯ ಮಾಡಲಾಗಿದೆ. ಇದೀಗ ಹನ್ನೊಂದನೇ ಶಾಲೆಯಾಗಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡಲಾಗುತ್ತಿದೆ.
ಇದನ್ನೂ ಓದಿ:ಶಿವರಾಜಕುಮಾರ್​ಗೆ ‘ಬುದ್ಧಿವಂತ’ ನಿರ್ದೇಶಕನ ನಿರ್ದೇಶನ; ಬರಲಿದೆ ಪ್ಯಾನ್ ಇಂಡಿಯಾ ಸಿನಿಮಾ…
ಇಂದು 60ಕ್ಕೂ ಹೆಚ್ಚು ಸ್ವಯಂಸೇವಕರು ಬೆಳಗ್ಗೆ 7 ಗಂಟೆಯಿಂದ ಕೆಲಸ ಮಾಡಿ ಈ ಶಾಲೆಗೆ ಬಣ್ಣ ಹಚ್ಚಿ ಚಂದವಾಗಿಸಿದ್ದಾರೆ. ಅವರಲ್ಲಿ ಒಬ್ಬರಾಗಿ ನಟಿ ನೀತೂ ಕೂಡ ಅಳಿಲು ಸೇವೆ ಮಾಡಿದ್ದು, ಆ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲೂ ಅವರು ಹಂಚಿಕೊಂಡಿದ್ದಾರೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
