ಉಡುಪಿ:ಸಂಕಷ್ಟ ನಿವಾರಣೆ ಮಾಡುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ತಿಂಗಳು ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಸ್ಯಾಂಡಲ್​ವುಡ್​ನ ಬಹುಕಾಲದ ನಟಿ ಪ್ರೇಮಾ ಕಾಪುವಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥಿಸಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕಾಗಿ ಉಡುಪಿ ಜಿಲ್ಲೆಗೆ ಭೇಟಿ ನೀಡಿರುವ ಪ್ರೇಮಾ, ಇಂದು ಬೆಳಗ್ಗೆ ಕಾಪುವಿನ ಕೊರಗಜ್ಜನ ಸನ್ನಿಧಿಗೆ ಬಂದಿದ್ದಾರೆ. ಈ ವೇಳೆ ಪ್ರಾರ್ಥಿಸುತ್ತಾ, ಮದುವೆಯಾಗಲು ಈಗಾಗಲೇ ವರ ನೋಡಿದ್ದೇನೆ. ಅದೇ ವರನನ್ನು ಮದುವೆ ಮಾಡಿಸುವಂತೆ ಪ್ರೇಮಾ ಕೊರಗಜ್ಜನಲ್ಲಿ ಹೇಳಿಕೊಂಡಿದ್ದಾರೆ.
ಕೊರಗಜ್ಜನಿಗೆ ಪೂಜೆ ಸಲ್ಲಿಸಿ, ಕಂಕಣ ಭಾಗ್ಯ ಕರುಣಿಸುವಂತೆ ಪ್ರಾರ್ಥಿಸಿಕೊಂಡಿರುವ ನಟಿ ಪ್ರೇಮಾ, ನಂತರ ಅಯ್ಯಪ್ಪ ದೇವಸ್ಥಾನ ಹಾಗೂ ಇತರೆ ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 14 =
Remember me
