ಮಂಡ್ಯ:ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಇಂದು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ, ಇಂದು ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಇಂದು ಮಂಡ್ಯಕ್ಕೆ ಬರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ನಾನು ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದೇನೆ. ನಿಮ್ಮೆಲ್ಲರನ್ನೂ ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ರಮ್ಯಾ ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿ:ತನ್ನ ಜತೆ ಮಲಗಿಕೊಳ್ಳಲು ಒತ್ತಾಯ ಮಾಡಿದ ಮಾಜಿ ಡಿವೈಎಸ್ಪಿ ವಿರುದ್ಧ ದೂರು ದಾಖಲಿಸಿದ ನಟಿ!
ನಾಳೆ ನಾನು ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದೇನೆ. ನಿಮ್ಮೆಲ್ಲರನ್ನೂ ಭೇಟಿಯಾಗಲು ಎದುರುನೋಡುತ್ತಿದ್ದೇನೆ
— Ramya/Divya Spandana (@divyaspandana)May 1, 2023

ಮಂಡ್ಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಪ್ರಚಾರ ಸಭೆಯಲ್ಲಿ ರಮ್ಯಾ ಭಾಗಿಯಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ರಮ್ಯಾ ಚೊಚ್ಚಲ ಬಾರಿಗೆ ಸಂಸದೆಯಾಗಿದ್ದರು. ತಮಗೆ ಸಿಕ್ಕ 6 ತಿಂಗಳ ಅವಧಿಯಲ್ಲೇ ಉತ್ತಮ ಕೆಲಸಗಳಿಂದ ಸೈ ಅನಿಸಿಕೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ರಮ್ಯಾ ಸೋಲಿಗೆ ಸ್ವಪಕ್ಷೀಯರೇ ಕಾರಣವಾಗಿದ್ದರು.
ಇದೀಗ ರಮ್ಯಾ ಅವರು ಮಂಡ್ಯ ಚುನಾವಣಾ ಅಖಾಡಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ಮಂಡ್ಯದಲ್ಲಿ ಚುನಾವಣಾ ಕಾವು ಇನ್ನಷ್ಟು ಜೋರಾಗಲಿದೆ. ಇನ್ನೊಂದೆಡೆ ಬಿಜೆಪಿ ಪರ ಸಂಸದೆ ಸುಮಲತಾ ಅಂಬರೀಷ್​ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ

ನೀರಾವರಿ ಯೋಜನೆ ಅನುಷ್ಠಾನ ಮಾಡದ ರಡ್ಡಿ-ಆಚಾರ್ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 1 =
Remember me
