ಬೆಂಗಳೂರು:ಸ್ಯಾಂಡಲ್​​ವುಡ್​ ನಟಿ ಸಂಯುಕ್ತ ಹೊರನಾಡು ಅವರು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ. ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾ ಮೂಲಕವಾಗಿ ಹಂಚಿಕೊಂಡಿದ್ದಾರೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿರುವ 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ ಮರಿಯನ್ನು ನಟಿ ಸಂಯುಕ್ತಾ ಹೊರನಾಡ್‌ ದತ್ತು ಪಡೆದಿದ್ದಾರೆ. ಈ ಹುಲಿ ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ವಾಸಿಸಲು ಆಗದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಂರಕ್ಷಣಾ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ.
ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆ ಪಡೆದ ಈ ನಟಿ,  ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಂಸ್ಥೆ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಎರಡು ವರ್ಷದ ಹುಲಿ ಮರಿಯೊಂದನ್ನು ದತ್ತು ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸಂಯುಕ್ತ ಟ್ವೀಟ್​​ನಲ್ಲಿ ಏನಿದೆ?:ನಿನ್ನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ದತ್ತು ಪಡೆದ 28 ತಿಂಗಳ ಹೆಣ್ಣು ಮರಿ ಸಿಂಚನಾ ನರವೈಜ್ಞಾನಿಕ ದೌರ್ಬಲ್ಯದಿಂದ ಬಳಲುತ್ತಿದ್ದು, ಕಾಡಿನಲ್ಲಿ ಸ್ವತಂತ್ರವಾಗಿ ಬದುಕಲು ಸಾಧ್ಯವಿಲ್ಲ. ಬಿಬಿಪಿಯ ರಕ್ಷಣಾ ಕೇಂದ್ರದಲ್ಲಿ ಮರಿಯನ್ನು ಆರೈಕೆ ಮಾಡಲಾಗುತ್ತಿದೆ. ದತ್ತು ಕಾರ್ಯಕ್ರಮವು ಮರಿಯ ದೈನಂದಿನ ಆಹಾರ ಅಗತ್ಯತೆಗಳು, ನಿರ್ವಹಣೆ ಮತ್ತು ಪಶುವೈದ್ಯಕೀಯ ಆರೋಗ್ಯ ಆರೈಕೆ ವೆಚ್ಚಗಳನ್ನು ಒಳಗೊಂಡಿದೆ.
Adopted Sinchana, the 28-month-old female cub yesterday at Bannerghatta Biologocal Park, she suffers from neurological weakness and may not survive in the wild independently. The cub is being cared for at the BBP’s Rescue Centre. The adoption program covers the cub’s daily food…pic.twitter.com/eVLiH8Hasj
— Samyukta Hornad (@samyuktahornad)August 31, 2024

ನಾವು ಸಾಕುಪ್ರಾಣಿಗಳಿಗೆ ನೀಡುತ್ತಿರುವ ಕಾಳಜಿಯನ್ನು ವನ್ಯಜೀವಿಗಳಿಗೂ ತಲುಪಿಸಲು ಪ್ರಾಣ ಮತ್ತು ನಮ್ಮೊಂದಿಗೆ ಸಂಬಂಧಿಸಿದ ಪ್ರತಿಯೊಬ್ಬರಿಗೂ ಇದು ಮಹತ್ವದ ಅವಕಾಶವನ್ನು ಪ್ರತಿನಿಧಿಸುತ್ತದೆ. ಎಲ್ಲಾ ಪ್ರಾಣಿಗಳು ಜೀವಿಸಲು  ಉತ್ತಮ ಸ್ಥಳವನ್ನಾಗಿ ಮಾಡುವಲ್ಲಿ ವೃತ್ತಿಪರರು ಮತ್ತು ಸಂಸ್ಥೆಗಳೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತೇವೆ ಎಂದು ಟ್ವೀಟ್​​ ಮಾಡಿದದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 8 =
Remember me
