ಬೆಂಗಳೂರು:ಲಾಕ್​ಡೌನ್​ ಹಿನ್ನೆಲೆಯಲ್ಲಿ ಪೊಲೀಸರು ನೀಡಿದ ಪಾಸ್​ ದುರ್ಬಳಕೆ ಮಾಡಿ ನಡುರಾತ್ರಿಯಲ್ಲಿ ಜಾಲಿ ರೈಡ್​ ನಡೆಸಿ ಅಪಘಾತಕ್ಕೆ ಕಾರಣವಾದ ನಟಿ ಶರ್ಮಿಳಾ ಮಾಂಡ್ರೆ ಹಾಗೂ ಅವರ ಜತೆ ಇದ್ದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ವಕೀಲರೊಬ್ಬರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.
ಮಹಿಳಾ ವಕೀಲರಾದ ಗೀತಾ ಮಿಶ್ರಾ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿ, ಪ್ರಕರಣ ಗಂಭೀರವಾಗಿದ್ದು ತನಿಖೆ ನಡೆಸುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಶುಕ್ರವಾರ ಮಧ್ಯ ರಾತ್ರಿಯಲ್ಲಿ ನಟಿ ಶರ್ಮಿಳಾ ಮಾಂಡ್ರೆ ಹಾಗೂ ಲೋಕೇಶ್​ ಎಂಬುವವರು ಪಾರ್ಟಿ ಮುಗಿಸಿ ತೆರಳುತ್ತಿದ್ದಾಗ ವಸಂತ ನಗರದಲ್ಲಿ ಅಪಘಾತ ಸಂಭವಿಸಿತ್ತು. ಕಾರಿನ ಗಾಜಿನ ಮೇಲೆ ಪೊಲೀಸರು ನೀಡಿದ್ದ ಕೋವಿಡ್​-19 ಪಾಸ್​ ಅಂಟಿಸಲಾಗಿತ್ತು. ನಟಿ ಜತೆ ಇದ್ದ ಲೋಕೇಶ್​ ಎಂಬುವವರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಂದ ಪಾಸ್​ ದೊರೆತಿರಬಹುದು. ಪೊಲೀಸರು ನೀಡಿರುವ ಪಾಸ್​ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.
ಈ ಕಾಯ್ದೆಯಡಿ ದೂರು ದಾಖಲಾದರೆ ತಪ್ಪಿತಸ್ಥರನ್ನು ಎರಡು ವರ್ಷ ಜಾಮೀನು ರಹಿತವಾಗಿ ಜೈಲಿನಲ್ಲಿಡಲು ಅವಕಾಶ ಇದೆ.
ಏ. 9ರ ಶಬ್​ ಇ ಬರಾತ್​ ಪ್ರಾರ್ಥನೆ ರದ್ದುಗೊಳಿಸಿದ ವಕ್ಫ್​ಬೋರ್ಡ್: ಮನೆಯಲ್ಲೇ ಪ್ರಾರ್ಥನೆ ಮಾಡುವಂತೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
