ಬೆಂಗಳೂರು:ನಟಿ ಕಾರುಣ್ಯ ರಾಮ್ ತಮ್ಮ ಸ್ನೇಹಿತರ ಜತೆ ಸೇರಿ ರಾಜರಾಜೇಶ್ವರಿ ನಗರ ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದಾರೆ.
ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಟ್ರಸ್ಟ್ ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.
ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪತ್ನಿಯ ಕತ್ತು ಹಿಸುಕಿದ ಪತಿ; ಕಪ್ಪಗಿದ್ದೀಯಾ, ಎಷ್ಟೇ ಪೌಡರ್ ಹಾಕಿದ್ರೂ ವೈಟ್ ಆಗೋದಿಲ್ಲ!
ಸಣ್ಣ ವಿಷಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ. ನಮ್ಮ ತಂಡ ರಸ್ತೆ ಗುಂಡಿಗಳನ್ನು ಮುಚ್ಚುವುದನ್ನು ಒಂದು ಸವಾಲಾಗಿ ತೆಗೆದುಕೊಂಡಿದೆ. ಅಪಘಾತ, ಸಾವುಗಳಿಗೆ ಕಾರಣವಾಗುವ ಇಂತಹ ಅಡಚಣೆಗಳ ಮೂಲಕ ಪ್ರಯಾಣಿಸುವುದು ತುಂಬಾ ಅಪಾಯಕಾರಿಯಾಗಿದೆ. ನಗರದಲ್ಲಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವುದು ನಮ್ಮ ಹೊಸ ಯೋಜನೆಯಾಗಿದೆ ಎಂದು ಟ್ವೀಟ್​​ ಮಾಡಿದ್ದಾರೆ.
Little things make great difference ! yes, team samakar has taken up pathole filling as a challenge …So please notify us by using#samakartrust& tag us @samskartrust with the pic of pathole near by you which need to be fixed join hands to build a better society👍🏼pic.twitter.com/NXLCRQFhU7
— Karunya Ram (@Karunya_oficial)March 2, 2023

ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರ್ಕೊಂಡು ಬರಬೇಕು; ಸಿದ್ದರಾಮಯ್ಯ ಆಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
