ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವುದು ರಾಮನಗರ ಜಿಲ್ಲೆ ಜನರಿಗೆ ದ್ರೋಹ, ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕವೆ ?ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ.ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎಂದು ಬಹಿರಂಗ ಸಭೆಯಲ್ಲಿ ಡಿಕೆಶಿ ಹೇಳಿರುವ ಮಾತಿಗೆ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ಕನಕಪುರ ತಾಲೂಕು ರಾಮನಗರ ಕ್ಷೇತ್ರದಲ್ಲಿಯೇ ಉಳಿಯಬೇಕು ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.
ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ ಎನ್ನುವ ಇವರು, ಇಷ್ಟು ದಿನ ಶಾಸಕರಾಗಿ, ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಕನಕಪುರಕ್ಕೆ 52 ಕೀ.ಮೀ. ದೂರದಲ್ಲಿದೆ ಬೆಂಗಳೂರು. 25 ಕೀ.ಮೀ. ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
2006-2007ರಲ್ಲಿ ಕನಕಪುರ ಹೇಗಿತ್ತು? ಡಿಕೆಶಿ ಅವರು ನೆನಪು ಮಾಡಿಕೊಳ್ಳಬೇಕು. ಆಗಲೇ ಪಟ್ಟಣದ ಡಬಲ್ ರಸ್ತೆ ನಿರ್ಮಾಣ, ಕನಕಪುರ ಹೆಬ್ಬಾಗಿಲಿನಲ್ಲಿರುವ ಸೇತುವೆ ನಿರ್ಮಾಣಕ್ಕೆ ಯೋಜನೆ ಕೊಟ್ಟವನು ನಾನು. ಸಂಗಮದಲ್ಲಿ ಪ್ರವಾಹ ಬಂದಾಗಲೆಲ್ಲ ಅನೇಕರು ಹಗ್ಗ ಕಟ್ಟಿಕೊಂಡು ರಸ್ತೆ ದಾಟಲು ಹೋಗಿ ಸಾವನ್ನಪ್ಪುತ್ತಿದ್ದರು. ಇದನ್ನು ತಪ್ಪಿಸಲು ಅಲ್ಲಿ ಸೇತುವೆ ನಿರ್ಮಿಸಿ ಮಹದೇಶ್ವರ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಯೋಜನೆಗೆ ಇದೇ ಡಿ.ಕೆ.ಶಿವಕುಮಾರ್ ಅವರು 2006ರಲ್ಲಿಯೇ ವಿರೋಧ ಮಾಡಿದ್ದರು! ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತು!! ನದಿಯಲ್ಲಿ ಜನರು ಕೊಚ್ಚಿಕೊಂಡು ಹೋಗಿ ಸತ್ತರೂ ಪರವಾಗಿಲ್ಲ. ಆದರೆ, ಇವರ ರಿಯಲ್ ಎಸ್ಟೇಟ್ ವ್ಯವಹಾರ ಪೊಗದಸ್ತಾಗಿ ಸಾಗಬೇಕು. ಸದ್ಯ ಬೆಂಗಳೂರಿನಿಂದ ಕನಕಪುರಕ್ಕೆ ಸುರಂಗ ಕೊರೆಸುವೆ ಎಂದು ಹೇಳಲಿಲ್ಲ. ಅದೇ ನಮ್ಮ ಪುಣ್ಯ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
