ಮಂಡ್ಯ (ಜುಲೈ 29):ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಸ್ಪೀಡ್ ಡಿಟೆಕ್ಟರ್​ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್​ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್​ಪ್ರೆಸ್​ವೇ ನಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಟೋಲ್ ಸಂಗ್ರಹ:ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ ಎನ್.ಹೆಚ್.ಐ.ಎ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಅಮೆರಿಕದಲ್ಲಿ ಗಗನಕ್ಕೇರಿದ ಸೋನಾ ಮಸೂರಿ ಅಕ್ಕಿಯ ಬೆಲೆ! ಇಂಡಿಯನ್ ಸ್ಟೋರ್ಸ್​ಗೆ ಮುಗಿಬಿದ್ದ ಎನ್​ಆರ್​ಐಗಳು

ಲಹರಿ ಸಾವನ್ನಪ್ಪಿದ್ದು ಹೃದಯಾಘಾತದಿಂದ ಅಲ್ಲ, ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ; ಕಾಂಗ್ರೆಸ್ ಮುಖಂಡನ ಪುತ್ರನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
