
ಬೆಂಗಳೂರು:ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಸಂಬಂದಿಸಿದ ಅಧಿಕಾರಿಗಳು ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸೂಚಿಸಿದರು.ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ಮಾತ್ರ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ಹೇಳಿದರು.ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ. ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು ಎಂದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
