ಬೆಂಗಳೂರು:ಆದಿಚುಂಚಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕೋವಿಡ್​ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ.ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ಹಾಗೂ ಪ್ರಧಾನ ಮಂತ್ರಿಗಳ ಪಿಎಂ ಕೇರ್ಸ್​ ನಿಧಿಗೆ 50 ಲಕ್ಷ ರೂ.ಗಳನ್ನು ಪ್ರತ್ಯೇಕವಾಗಿ ನೀಡಿದ್ದಾರೆ.
ಸಿಎಂ ಬಿ.ಎಸ್​. ಯಡಿಯೂರಪ್ಪ ಭಾನುವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​. ಆರ್​. ವಿಶ್ವನಾಥ್ ಹಾಗೂ ಶಾಸಕ ಕೃಷ್ಣಪ್ಪ ಸಹ ಹಾಜರಿದ್ದರು.
ಇದನ್ನೂ ಓದಿ;ಹೊರ ರಾಜ್ಯ, ವಿದೇಶದಿಂದ ರಾಜ್ಯಕ್ಕೆ ಬರುವವರಿಗೆ ಕಡ್ಡಾಯ ಕ್ವಾರಂಟೈನ್​
ಸ್ವಾಮಿಜಿಗಳ ಜತೆ ಪ್ರತ್ಯೇಕವಾಗಿ ಸಿಎಂ ಚರ್ಚೆ ನಡೆಸಿದರು. ಕೋವಿಡ್ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆ ಸ್ವಾಮೀಜಿ ಹಲವು ಸಲಹೆಯನ್ನು ನೀಡಿದ್ದಾರೆ.
ರಾಜ್ಯದ ಪರಿಸ್ಥಿತಿ, ಹಾಗೂ ಸಮಸ್ಯೆಗಳ ಬಗ್ಗೆ ಶ್ರೀಗಳಿಗೆ ಅರಿವಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಣ , ಆರ್ಥಿಕ ಪರಿಸ್ಥಿತಿ ಸುಧಾರಣೆ ಸೇರಿ ಹಲವು ವಿಚಾರಗಳ ಬಗ್ಗೆ ಸ್ವಾಮೀಜಿ ಸಲಹೆ ನೀಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ
ಪ್ರಧಾನಿ ಮೋದಿ ಜತೆ ಸೋಮವಾರ (ಮೇ 11) ವಿಡಿಯೋ ಕಾನ್ಫರೆನ್ಸ್ ಇದೆ. ಆ ಸಭೆಯಲ್ಲಿ ಯಾವ ನಿಲುವು ತಳೆಯಬೇಕೆಂಬುದರ ಬಗ್ಗೆಯೂ ಸಮಾಲೋಚನೆ ನಡೆಸಿದ್ದೇನೆ ಎಂದೂ ಯಡಿಯೂರಪ್ಪ ಹೇಳಿದರು.
ಮೇ 12ರಿಂದ ಹಂತಹಂತವಾಗಿ ಸಂಚರಿಸಲಿವೆ ಪ್ಯಾಸೆಂಜರ್​ ರೈಲುಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
