ಬೆಂಗಳೂರು:ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವನನ್ನು ಸಿಸಿಬಿ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಕಳೆದ ನಾಲ್ಕು ತಿಂಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ.
ಡ್ರಗ್​ ಮಾಫಿಯಾ ಪ್ರಕರಣದಲ್ಲಿ ಆದಿತ್ಯ ಆಳ್ವ 6ನೇ ಆರೋಪಿಯಾಗಿದ್ದ. ಎಫ್​ಐಆರ್ ದಾಖಲಾದ ಬೆನ್ನಲ್ಲೇ ತಲೆಮರಿಸಿಕೊಂಡಿದ್ದ ಆದಿತ್ಯ ಆಳ್ವಗೆ ಸಿಸಿಬಿ ಪೊಲೀಸರು ಸೆ. 21ರಂದು ಲುಕ್​ಔಟ್​ ನೋಟಿಸ್​ ಜಾರಿ ಮಾಡಿದ್ದರು. ಅಲ್ಲದೆ, ಜಾಮೀನು ಅರ್ಜಿ ಸಲ್ಲಿಸುವುದನ್ನು ಬಿಟ್ಟು, ತನ್ನ ವಿರುದ್ಧದ FIR ರದ್ದು ಮಾಡುವಂತೆ ಆದಿತ್ಯ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ.
ಇದನ್ನೂ ಓದಿರಿ:ಜ.26ರ ಟ್ರ್ಯಾಕ್ಟರ್​ ರ‍್ಯಾಲಿಗೆ ತಡೆ ನೀಡಲು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಮನವಿ
ಪ್ರಕರಣ ಬೆಳಕಿಗೆ ಬಂದು ಆದಿತ್ಯ ಆಳ್ವ ಪಾತ್ರ ಇರುವುದು ಖಚಿತವಾದ ಬೆನ್ನಲ್ಲೇ ಹೆಬ್ಬಾಳದಲ್ಲಿರುವ ಮನೆ ಹಾಗೂ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡ್ರಗ್ಸ್ ಪತ್ತೆಯಾಗಿತ್ತು. ರೆಸಾರ್ಟ್ ಮ್ಯಾನೇಜರ್ ರಾಮ್​ ದಾಸ್​ನನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಲಾಗಿದೆ.
ಆದಿತ್ಯ, ನಟಿ ರಾಗಿಣಿ ಸಂಜನಾ, ವಿರೇನ್ ಖನ್ನ ಸೇರಿದಂತೆ ಸಾಕಷ್ಟು ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ತನ್ನ ಹೌಸ್ ಆಫ್ ಲೈವ್ಸ್ ಮನೆಯಲ್ಲಿ ಪೇಜ್ 3 ಪಾರ್ಟಿ ನಡೆಸುತ್ತಿದ್ದ ಎನ್ನಲಾಗಿದೆ. ಕರೊನಾ ಲಾಕ್​ಡೌನ್ ಅಮಯದಲ್ಲೂ ಸೆಲೆಬ್ರಿಟಿಗಳನ್ನು ಕರೆಸಿ ಪಾರ್ಟಿ ನಡೆಸುತ್ತಿದ್ದ. ಖ್ಯಾತ ಉದ್ಯಮಿಗಳು ಹಾಗೂ ಟೆಕ್ಕಿಗಳನ್ನು ಪಾರ್ಟಿಗೆ ಸೆಳೆಯುತ್ತಿದ್ದ ಎಂದು ಹೇಳಾಗಿದೆ.
ಇದನ್ನೂ ಓದಿರಿ:ಕೆಲಸದಾಳಿನ ಜತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! ಕಸದ ರಾಶಿಯಲ್ಲೇ ಶವವನ್ನು ಹೂತಿಟ್ಟ ಜೋಡಿ
ವಿರೇನ್ ಖನ್ನನ ಜತೆಗೂಡಿ ಪೇಜ್ 3 ಪಾರ್ಟಿ ನಡೆಸಲಾಗುತ್ತಿತ್ತು. ಪಾರ್ಟಿಯಲ್ಲಿ ಎಕ್ಸ್ ಟಸಿ ಮಾತ್ರೆ, ಎಲ್​ಎಲ್​ಟಿ ಸ್ಟಿಪ್ಸ್ ಬಳಕೆಯಾಗುತ್ತಿತ್ತು. ಲೂಮ್ ಪೆಪ್ಪರ್ ಸಾಂಬನ ಬಳಿ ವಿರೇನ್​ ಖನ್ನ ಡ್ರಗ್ಸ್ ತರೆಸುತ್ತಿದ್ದ. ತಂದಂತ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ಆರೋಪಿಗಳು ಬಳಕೆ ಮಾಡುತ್ತಿದ್ದರು ಎನ್ನಲಾಗಿದೆ.
ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್​ ಮಾಫಿಯಾ ಕೇಸಿನಲ್ಲಿ ಈಗಾಗಲೇ ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ, ಬಹುಭಾಷಾ ನಟಿ ಸಂಜನಾ ಗಲ್ರಾನಿ ಜತೆಗೆ ಹಲವು ಡ್ರಗ್ಸ್​ ಪೆಡ್ಲರ್​ಗಳು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ಸಂಜನಾ ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಇದನ್ನೂ ಓದಿರಿ:ವಿಲಾಸಿ ಜೀವನಕ್ಕಾಗಿ ಒಂಟಿಯಾಗಿ ಮನೆ ಕಳ್ಳತನ ಎಸಗುತ್ತಿದ್ದ ಕಳ್ಳ ಜೈಲಿಗೆ
ಡ್ರಗ್ಸ್ ಆರೋಪಿ ಆದಿತ್ಯ ಆಳ್ವನ ‘ಹೌಸ್​ ಆಫ್​ ಲೈಫ್’ ನೋಡಿದ್ರೆ ಬೆಚ್ಚಿಬೀಳ್ತೀರಿ!

ತಲೆಮರೆಸಿಕೊಂಡಿರುವ ಆದಿತ್ಯ ಆಳ್ವ ಹುಡುಕಾಟಕ್ಕೆ ಲುಕ್​ಔಟ್​ ನೋಟಿಸ್​ ಜಾರಿ

ಜಾಮೀನು ಕೇಳೋದು ಬಿಟ್ಟು, ತನ್ನ ವಿರುದ್ಧದ ಕೇಸ್​ ಅನ್ನೇ ರದ್ದು ಮಾಡಿ ಎಂದ ಆದಿತ್ಯ ಆಳ್ವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
