ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಬೇಡಿಕೆ ಅನುಗುಣವಾಗಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಪ್ರವೇಶ ಪಡೆದುಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.
ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶಾನುಮೋದನೆಯನ್ನು ಇಲಾಖೆಯು ಅಂಗೀಕರಿಸಲಿದ್ದು, ಪ್ರಾಂಶುಪಾಲರಿಗೆ ಈ ಬಗ್ಗೆ ಯಾವುದೇ ಗೊಂದಲ ಬೇಡ. ಲಭ್ಯವಿರುವ ತರಗತಿಗಳ ಅನುಗುಣವಾಗಿ ಪ್ರವೇಶ ನೀಡಿದ್ದು, ಒಂದು ವಿಭಾಗಕ್ಕೆ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಆ ವಿದ್ಯಾರ್ಥಿಗಳನ್ನು ಹಾಲಿ ವಿಭಾಗದಲ್ಲಿಯೇ ಸೇರಿಸಿಕೊಳ್ಳಬಹುದು. ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದರೆ ನೂತನ ವಿಭಾಗವನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದು ಕೇವಲ ಐಚ್ಛಿಕ ವಿಷಯಗಳಿಗೆ ಮಾತ್ರ ಅನ್ವಯಿಸಲಿದೆ. ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದ ಕಾರಣಕ್ಕೆ ಮೂಲಭೂತ ಸೌಕರ್ಯಗಳ ಕೊರತೆಯೇನಾದರೂ ಕಂಡುಬಂದಲ್ಲಿ ಆಯಾ ಕಾಲೇಜುಗಳಲ್ಲಿ ಬ್ಯಾಚ್, ಶ್‌ಟಿ ಆಧಾರದ ಮೇಲೆ ಅಂದರೆ ಬೆಳಗಿನ ಮತ್ತು ಮಧ್ಯಾಹ್ನದ ವೇಳೆಯಲ್ಲಿ ಪ್ರತ್ಯೇಕ ಬ್ಯಾಚ್‌ಗಳನ್ನು ಮಾಡಿ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ.
ರಾಜ್ಯದಲ್ಲಿ ಉನ್ನತ ಶಿಕ್ಷಣ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ದೃಷ್ಠಿಯಿಂದ ರಾಜ್ಯದ ಎಲ್ಲ ವಿವಿ ಮತ್ತು ಸರ್ಕಾರಿ ಕಾಲೇಜುಗಳಿಗೆ ಈಗಾಗಲೇ ಮಂಜೂರಾಗಿರುವ ಪ್ರವೇಶ ಮಿತಿ ಶೇ.20 ಹೆಚ್ಚುವರಿ ಪ್ರವೇಶಾತಿಯನ್ನು ಕಲ್ಪಿಸುವ ಬಹುದಾಗಿದೆ. ಈ ಹೆಚ್ಚುವರಿಯಾಗಿ ಮಾಡಿಕೊಳ್ಳುವ ಪ್ರವೇಶಾತಿಯನ್ನು ಸಹ ಅನುಮೋದಿಸುವಂತೆ ಆಯುಕ್ತರು ಹೇಳಿದ್ದಾರೆ.
ಕಾರ್ಯಪಡೆ ರಚನೆ:ನ.17ರಿಂದ ಕಾಲೇಜುಗಳು ಆರಂಭವಾಗಲಿದ್ದು, ಈ ವೇಳೆ ಸುರಕ್ಷತಾ ಕ್ರಮ ಅನುಸರಿಸುವುದಕ್ಕಾಗಿ ಕಾಲೇಜು ಹಂತದಲ್ಲಿ ಕಾರ್ಯಪಡೆ ರಚಿಸಿದೆ. ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಅಧ್ಯಕ್ಷರಾಗಿದ್ದು, ಹೆಚ್ಚುವರಿ ನಿರ್ದೇಶಕರು, ಜಂಟಿ ನಿರ್ದೇಶಕರು, ನೋಡಲ್ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಪ್ರಾಂಶುಪಾಲರಿಗೆ ಸಮನ್ವಯ ಸಾಧಿಸಿ ಎಸ್‌ಒಪಿ ಮಾರ್ಗಸೂಚಿಗಳ ಅನ್ವಯ ತರಗತಿ ಆರಂಭಿಸಬೇಕೆಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 12 =
Remember me
