ಬೆಂಗಳೂರು;ಸಿಎಸ್‌ಆರ್ ಅನುದಾನದಲ್ಲಿ ನೂತನ ಶಾಲೆಗಳನ್ನು ನಿರ್ಮಿಸಿ ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು, ಪಂಚಾಯಿತಿ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅನುದಾನ ಸದ್ಬಳಕೆ ಕುರಿತ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಸ್‌ಆರ್ ಹಣವು ಕೇವಲ ನಗರೀಕರಣಕ್ಕೆ ಮಾತ್ರ ಬಳಕೆಯಾಗುತ್ತಿದೆ, ಇದನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವರ ಶಾಲೆಯ ಅಧ್ಯಾಪಕರನ್ನೇ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಿ ಪಾಠ ಮಾಡಿಸಬೇಕು. ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು ಎಂಬುದು ಸರ್ಕಾರದ ಮಹತ್ವದ ಯೋಚನೆ ಮತ್ತು ಯೋಜನೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
