ಬೆಂಗಳೂರು:ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಶಿಕ್ಷಣ ವ್ಯವಸ್ಥೆ ಸುಧಾರಣೆಯಲ್ಲಿ ಸರ್ಕಾರಿ ‘ಶಾಲೆಗಳ ದತ್ರು‌ ಸ್ವೀಕಾರ’ ವಿನೂತನ ಕಾರ್ಯಕ್ರಮ ನಿರ್ಣಾಯಕ ಪಾತ್ರ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದವರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿಯ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಗಳನ್ನು ದತ್ತು ಪಡೆದವರು ಅಭಿವೃದ್ಧಿ ಕಾರ್ಯದ ಬಳಿಕ 3-4 ತಿಂಗಳಿಗೊಮ್ಮೆ ಭೇಟಿ ನೀಡಿ, ಮಕ್ಕಳ ಕಲಿಕಾಮಟ್ಟ ಪರಿಶೀಲನೆ, ಶಿಕ್ಷಕರ ಜತೆಗೆ ವಿಚಾರ-ವಿನಿಮಯ, ಪಾಲಕರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಎಸ್.ಸುರೇಶ್ ಕುಮಾರ್, ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್ ದೊರೆಸ್ವಾಮಿ ಮಾತನಾಡಿದರು. ಸಚಿವ ಬಿ.ಶ್ರೀರಾಮುಲು, ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆಯುಕ್ತ ವಿ.ಅನ್ಬುಕುಮಾರ್ ಇದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × three =
Remember me
