ಜಾನುವಾರುಗಳಿಗೆ ಅನುಗ್ರಹ ತಪ್ಪದಿರಲಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಅನುಗ್ರಹ ಯೋಜನೆಗೆ ಅನುದಾನ ನಿಲ್ಲಿಸದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕುರಿ, ಮೇಕೆ, ಹಸು, ಎಮ್ಮೆ, ಎತ್ತು ಮುಂತಾದ ಜಾನುವಾರುಗಳು ಆಕಸ್ಮಿಕವಾಗಿ ಸತ್ತರೆ ಗರಿಷ್ಠ ಹತ್ತು ಸಾವಿರ ರೂ.ವರೆಗೆ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ನನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದೆವು, ಈ ಯೋಜನೆ ನಿಲ್ಲಿಸಿ ಪಶುಪಾಲಕರ ವಿರೋಧಿ ನಿಲುವನ್ನು ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವೇಣಗುಡ್ಡದ ಬಳಿ ಕರಬೂಜ ಹಣ್ಣು ಹಾಗೂ ಬಳ್ಳಿಯನ್ನು ತಿಂದು 60 ಕುರಿ ಸತ್ತಿವೆ. ಈ ರೀತಿ ಪ್ರಕರಣ ರಾಜ್ಯಾದ್ಯಂತ ಸಂಭವಿಸುತ್ತಿವೆ. ಇದರಿಂದ ಪಶುಪಾಲಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ತಕ್ಷಣವೇ ಅನುಗ್ರಹ ಯೋಜನೆಗೆ ಈ ಹಣಕಾಸು ವರ್ಷದಲ್ಲಿ ಅನುದಾನ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ಸಭೆ: ನಿತ್ಯದ ದುಡಿಮೆ ನಂಬಿ ಬದುಕುತ್ತಿರುವ ವೃತ್ತಿ ಆಧಾರಿತ ಕೆಲಸದ ಮೇಲೆ ಅವಲಂಬಿತರ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಅವರು ಮಂಗಳವಾರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದು, ಸವಿತಾ ಸಮಾಜ, ಮಡಿವಾಳ, ನೇಕಾರ, ಕುಂಬಾರ, ಕಮ್ಮಾರ, ಚಮ್ಮಾರ, ಬೀದಿಬದಿ ವ್ಯಾಪಾರಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಜತೆ ಚರ್ಚೆ ನಡೆಸಲಿದ್ದಾರೆ.
ಬಾಡಿಗೆ, ಶುಲ್ಕ ವಿನಾಯಿತಿಗೆ ಆಗ್ರಹ
ಕರೊನಾ ಶಾಕ್​ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲ್-ಕಾಲೇಜುಗಳ ಶುಲ್ಕ, ವಿದ್ಯುತ್ ಬಿಲ್, ಪೆಟ್ರೋಲ್-ಡೀಸೆಲ್ ದರ ಕಡಿತ ಘೊಷಣೆ ಮಾಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಆರ್​ಬಿಐ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾಗೋಪಾಯಗಳನ್ನು ಹುಡುಕಬೇಕು. ಮುಂಬರುವ ದಿನಗಳಲ್ಲಿ ’ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರ್ಕಾರದ ಆದ್ಯತೆ ಆಗಲಿದೆ ಎಂದಿದ್ದಾರೆ. ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹಾಗಾಗಿ ಸರ್ಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೊನಾ ತೆರಿಗೆ ಸಂಗ್ರಹಿಸಲಿ ಎಂದು ತಿಳಿಸಿದ್ದಾರೆ. ರೈತರು ಮತ್ತು ಅಸಂಘಟಿತ ವಲಯದ ಕಾರ್ವಿುಕರ ಜೀವನೋಪಾಯಗಳ ರಕ್ಷಣೆ ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ವೆಂಟ್ಸ್ ಕೆಲಸಗಾರರು, ಕಟ್ಟಡ ಕಾರ್ವಿುಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ರೈತರ ಕೈಬಿಡದೆ ನೆರವಾಗುವಂತೆ ಮನವಿ
ಲಾಕ್ ಡೌನ್​ನಿಂದ ಹಣ್ಣು, ತರಕಾರಿ, ಹೂ ಬೆಳೆದು ಹಾನಿಗೀಡಾಗಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಲಾಕ್ ಡೌನ್​ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವವರು ರೈತ ಸಮುದಾಯ. ಅದರಲ್ಲೂ ಹಣ್ಣು, ತರಕಾರಿ, ಹೂ ಬೆಳೆದವರು ಕಣ್ಣೀರಿಡುವಂತಾಗಿದೆ. ಇತ್ತ ಸ್ಥಳೀಯ ಮಾರುಕಟ್ಟೆಯೂ ಇಲ್ಲ. ಬೇರೆ ರಾಜ್ಯ ಹಾಗೂ ದೇಶಗಳಿಗೆ ರಫ್ತು ಸಾಧ್ಯವಾಗುತ್ತಿಲ್ಲ. ಹಾಗಾಗಿ ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಹಣ್ಣು, ತರಕಾರಿ ಬೆಳೆದ ರೈತರು ಸಾಲಗಾರರಾಗಿದ್ದಾರೆ. ಹೂ ಬೆಳೆದವರಂತೂ ಶೂನ್ಯ ಮಾರುಕಟ್ಟೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಭಯಾನಕ ಸ್ಥಿತಿ ನಿರ್ವಣವಾಗಿದೆ. ಆದ್ದರಿಂದ ಹಣ್ಣು, ಹೂ, ತರಕಾರಿ ಬೆಳೆ ನಷ್ಟ ಸಮೀಕ್ಷೆ ಮಾಡಿಸಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ದೇವೇಗೌಡರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬಜೆಟ್ ಯೋಜನೆಗಳನ್ನು ಕೈಬಿಟ್ಟರೂ ಸರಿಯೇ ಅನ್ನದಾತನ ಕೈಬಿಡಬೇಡಿ ಎಂದು ಸಲಹೆ ನೀಡಿದ್ದಾರೆ. ನಿತ್ಯ 7.50 ಲಕ್ಷ ಹಾಲು ಖರೀದಿಸಿ ಬಡವರಿಗೆ ಹಂಚುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಬಂದಿದ್ದೀರಿ.
ಅಂತಹ ದಿಟ್ಟ ತೀರ್ಮಾನ ಕೈಗೊಂಡಿದ್ದಕ್ಕೆ ನಿಮಗೆ ಹಾಗೂ ಸಂಪುಟಕ್ಕೆ ಅಭಿನಂದನೆಗಳು. ಅದೇ ರೀತಿ ಹಣ್ಣು, ತರಕಾರಿ, ಹೂ ಬೆಳೆಗಾರರ ಹಿತ ಕಾಪಾಡಿ ಎಂದು ಮನವಿ ಮಾಡಿದ್ದಾರೆ.
ಕರೊನಾ ಮಹಾಮಾರಿಗೆ ಕಲಬುರಗಿಯಲ್ಲಿ 5ನೇ ಬಲಿ: ರಾಜ್ಯದಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
