ಬೆಂಗಳೂರು: ವಕೀಲ ಅರುಣ ಶ್ಯಾಮ ಸೇರಿ ಮೂವರನ್ನು ಹೆಚ್ಚುವರಿ ಅಡ್ವೋಕೇಟ್ ಜನರಲ್​ಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಸಂಬಂಧ, ರಾಜ್ಯಪಾಲರ ಆದೇಶಾನುಸಾರ ಕಾನೂನು ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಇಬ್ಬರದ್ದು ನೇಮಕವಾದರೆ, ಇನ್ನೊಬ್ಬರದ್ದು ಅವಧಿ ಮುಂದುವರಿಕೆಯಾಗಿದೆ.
ಈ ಆದೇಶದಲ್ಲಿರುವ ಮಾಹಿತಿ ಪ್ರಕಾರ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಆರ್​.ನಟರಾಜ್​ ಅವರು ನ್ಯಾಯಾಧೀಶರಾಗಿ ಬಡ್ತಿ ಪಡೆದುಕೊಂಡ ಕಾರಣ ತೆರವಾಗಿದ್ದ ಸ್ಥಾನಕ್ಕೆ ಅರುಣ ಶ್ಯಾಮ ಅವರ ನೇಮಕವಾಗಿದೆ. ಇದು ಬೆಂಗಳೂರು ಪೀಠದಲ್ಲಿನ ಹೆಚ್ಚುವರಿ ಅಡ್ವೋಕೇಟ್ ಜನರಲ್​ -1 ಹುದ್ದೆಯಾಗಿದೆ. ಇದೇ ರೀತಿ, ಗುಲ್ಬರ್ಗ ಪೀಠದಲ್ಲಿ ಖಾಲಿ ಇದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್​ ಹುದ್ದೆಗೆ ವಕೀಲ ವೈ.ಎಚ್​.ವಿಜಯಕುಮಾರ್ ನೇಮಕವಾಗಿದೆ.
ಇದನ್ನೂ ಓದಿ:ರಾಷ್ಟ್ರೀಯ ನೇಮಕ ನೀತಿ ಜಾರಿ ಬೇಡ; ಜಯ ಕರ್ನಾಟಕ ಸಂಘಟನೆ ಒತ್ತಾಯ
ಇನ್ನು ಧಾರವಾಡ ಪೀಠದಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧ್ಯಾನ್ ಚಿನ್ನಪ್ಪ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ಪದೋನ್ನತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ರಾಜ್ಯ ಶುಶ್ರೂಷಾಧಿಕಾರಿಗಳ ಸಂಘ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 3 =
Remember me
