ಬೆಂಗಳೂರು:ಹೈಕೋರ್ಟ್‌ನ ಖ್ಯಾತ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಪುತ್ರ ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಭಾನುವಾರ ಊಟಿಯಲ್ಲಿ ತಂಗಿದ್ದ ಇವರು, ತಡರಾತ್ರಿ ವಾಂತಿ-ತಲೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದರು. ಪಾರ್ಥಿವ ಶರೀರವನ್ನು ಊಟಿಯಿಂದ ಬೆಂಗಳೂರಿಗೆ ತರಲಾಗಿದೆ.
ಇದನ್ನೂ ಓದಿ:ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ
ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ಇರಿಸಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಜಯನಗರದ ಸೌತ್ ಎಂಡ್ ಸರ್ಕಲ್‌ನ ಪಟಾಲಮ್ಮ ದೇವಸ್ಥಾನ ರಸ್ತೆಯಲ್ಲಿರುವ ಸಿ.ವಿ.ನಾಗೇಶ್ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಮಂಗಳವಾರ ಸಂಜೆ ಅಥವಾ ಬುಧವಾರ ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ:ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ರಾಜಕೀಯ ಮುಖಂಡರು, ನಟ ಶಿವರಾಜಕುಮಾರ್, ಹೈಕೋರ್ಟ್‌ನ ಹಿರಿಯ, ಕಿರಿಯ ವಕೀಲರು ಪಾರ್ಥಿವ ಶರೀರದ ದರ್ಶನ ಪಡೆದರು.
ಅಯೋಧ್ಯಾ ರಾಮಮಂದಿರ ಸಂಕ್ರಾಂತಿ ಬಳಿಕ ಲೋಕಾರ್ಪಣೆ, ಅಲ್ಲಿ ಯಾವುದೇ ಸೇವೆಗಳಿರಲ್ಲ: ಪೇಜಾವರಶ್ರೀ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 2 =
Remember me
