ಬೆಂಗಳೂರು:ಶಾಲೆಗಳನ್ನು ಟಾರ್ಗೆಟ್​​ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಖದೀಮರ ಗ್ಯಾಂಗ್​ವೊಂದನ್ನು 22 ವರ್ಷಗಳ ನಂತರ ಅಂತರರಾಜ್ಯ ಕಳ್ಳರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಣ್ಣಾ ದೊರೈ, ವೀರಮಲೈ ಹಾಗೂ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಈ ಖದೀಮರು ಶಾಲೆಗಳಲ್ಲಿ ಕಳ್ಳತನ ಮಾಡುವುದನ್ನೇ ಗುರಿಯಾಗಿಸಿಕೊಂಡಿದ್ದಾರೆ. ಈ ಕಳ್ಳರ ಗ್ಯಾಂಗ್​ 2000ನೇ ಇಸವಿಯಿಂದ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ತಮಿಳುನಾಡಿನ ಶಾಲೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಆದರೆ ಪೊಲೀಸರಿಗೆ ಇದುವರೆಗೆ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಪೊಲೀಸರ ಕಾರ್ಯಾಚರಣೆಯಿಂದ ಗ್ಯಾಂಗ್​ ಸಿಕ್ಕಿ ಬಿದ್ದಿದೆ.
ಇದನ್ನೂ ಓದಿ:ಗರ್ಲ್ ಫ್ರೆಂಡ್​​ಗಾಗಿ ಸ್ನೇಹಿತನ ಹೃದಯ ಕಿತ್ತು, ಬೆರಳು ಕತ್ತರಿಸಿ ಕೊಂದ ಯುವಕ
ಜ್ಞಾನಭಾರತಿ ಠಾಣೆ ಪೊಲೀಸರು ಈ ಮೂವರು ಖದೀಮರನ್ನು ಬಂಧಿಸಿದ್ದು, ಆರೋಪಿಗಳಿಂದ 5ಲಕ್ಷ ಮೌಲ್ಯದ ವಿವಿಧ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಾವಣಗೆರೆ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 12 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣದ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎಂಜಿನ್​ ಸಮಸ್ಯೆ; ಕೆಟ್ಟುನಿಂತ ಇಂಡಿಗೋ, ಗೋಫಸ್ಟ್​​ನ 50ಕ್ಕೂ ಹೆಚ್ಚು ವಿಮಾನಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
