ಬೆಂಗಳೂರು: ಪಿಎಸ್‌ಐ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, 545 ಮತ್ತು 403 ಪಿಎಸ್‌ಐ ನೇಮಕದ ಬಳಿಕ 660ಪಿಎಸ್‌ಐ ಹುದ್ದೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ತಿಳಿಸಿದರು.
ಪಿಎಸ್‌ಐ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, ಆದಷ್ಟು ಬೇಗ ಮೌಲ್ಯಮಾಪನ ಮುಗಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಯಾವುದೇ ರೀತಿಯ ಘಟನೆ ನಡೆದಿಲ್ಲ. ಬ್ಲೂಟೂತ್ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಸಾಧ್ಯವಾಗಿಲ್ಲ. ಇದಕ್ಕೆ ಯಾರು ಸಹ ಪ್ರಯತ್ನಿಸಿಲ್ಲ ಎಂದು ಭಾವಿಸಿದ್ದೇನೆ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಕೆಲವರು ಗೈರಾಗಿದ್ದಾರೆ. ಆದಷ್ಟು ಬೇಗ ಮೌಲ್ಯಮಾಪನವನ್ನು ಮುಗಿಸಿ, ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಮುಂದಿನ ಹಂತದಲ್ಲಿ 403 ಪರೀಕ್ಷೆ ನಡೆಸಲಾಗುವುದು. ಅದನ್ನು ಅಹ ಕೆಇಎ ಅವರಿಗೆ ವಹಿಸಲಾಗುವುದು. ನೋಟಿಫಿಕೇಷನ್ ಆಗಿ, ಫಿಸಿಕಲ್ ಟೆಸ್ಟ್ ಸಹ ಮುಗಿದಿದೆ. ಪರೀಕ್ಷೆ ಬಾಕಿ ಇದೆ. ಈ ಎರಡು ನೇಮಕಾತಿ ಪ್ರಕ್ರಿಯೆ ಮುಗಿದರೆ ಇಲಾಖೆಗೆ ಒಟ್ಟು 948 ಪಿಎಸ್‌ಐ ಸಿಗುತ್ತಾರೆ ಎಂದು ಹೇಳಿದರು.403 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರಿಗೆ ವಹಿಸುವ ಬಗ್ಗೆ ಚಿಂತನೆ ಇದೆ. ಯಾವುದೇ ರೀತಿಯ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಿದ್ದಾರೆ. ಮುಂದಿನ ನೇಮಕಾತಿಗಳಲ್ಲಿಯೂ ಇದೇ ರೀತಿ ಪರೀಕ್ಷೆ ನಡೆಸಿಕೊಡಲಿ ಎಂದರು.
ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಕೃತ್ಯದ ಉದ್ದೇಶ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಈ ರೀತಿಯ ಘಟನೆ ನಡೆದಾಗ ಯಾವುದಾದರೂ ಉದ್ದೇಶ ಇದ್ದೇ ಇರುತ್ತದೆ. ಅವರ ಉದ್ದೇಶ ಏನಾಗಿತ್ತು ಎಂಬುದನ್ನು ತಿಳಿದುಕೊಳ್ಳಬೇಕು. ಯಾರಾದದರೂ ಕುಮ್ಮಕ್ಕು ಇದೆಯಾ ಎಂಬುದು ಗೊತ್ತಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಬಿಜೆಪಿಯವರು ಪ್ರತಿಭಟನೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಕರಣದ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ. ಯಾರು ಮಾಡಿದ್ದಾರೆ ಎಂಬುದು ಗೊತ್ತಾದಮೇಲೆ ತಾವೇ ಸುಮ್ಮನಾಗುತ್ತಾರೆ. ನಾನು ಈಗಲೇ ಊಹಾತ್ಮಕವಾಗಿ ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ? ಎಂದು ಹೇಳುವುದಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲವನ್ನು ಪರೀಶೀಲನೆ ನಡೆಸಲಾಗುವುದು. ಸಾರ್ವಜನಿಕವಾಗಿ ಯಾರು ಅಂತ ಹೇಳುವುದಕ್ಕೆ ಬರುವುದಿಲ್ಲ. ಸಾಕ್ಷ್ಯಧಾರಗಳ ಸಮೇತ ಉತ್ತರಿಸಲಾಗುವುದು ಎಂದು ಹೇಳಿದರು.
ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂಬ ಸಚಿವ ರಾಜಣ್ಣ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುಮಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಈ ಹಿಂದೆ 27 ಸೀಟ್ ಗೆದ್ದಿದ್ದನ್ನು ಸ್ಮರಿಸಬೇಕು ಎಂದರು.ರಾಜ್ಯದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣ ಇದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಎಂಟು ತಿಂಗಳಲ್ಲಿ ಜನಪರ ಆಡಳಿತ ನೀಡಿರುವುದರಿಂದ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಡಾ.ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − three =
Remember me
