ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಇಂದು ಉದ್ಯಮಿಗಳಿಬ್ಬರ ಕೊಲೆಯ ಬೆನ್ನಿಗೇ ಇನ್ನೊಬ್ಬ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ. ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರೌಡಿ ಶೀಟರ್ ಕೂಡ ಆಗಿದ್ದ ಕಪಿಲ್ ಎಂಬಾತ ಕೊಲೆಯಾದ ವ್ಯಕ್ತಿ. ಡಿ.ಜೆ.ಹಳ್ಳಿ ಕೆಎಚ್​ಬಿ ಮುಖ್ಯರಸ್ತೆಯಲ್ಲಿ ಬೈಕ್​ಗಳಲ್ಲಿ ಬಂದಿದ್ದ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದು, ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ.
ಇದನ್ನೂ ಓದಿ:ನಿಮ್ಮ ಏರಿಯಾಗೆ ಹೊಸ ಸಬ್​ ಇನ್​ಸ್ಪೆಕ್ಟರ್​?; 61 ಪಿಎಸ್​ಐಗಳ ವರ್ಗಾವಣೆ, ಇಲ್ಲಿದೆ ಪೂರ್ತಿ ವಿವರ..
ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದ ಕಪಿಲ್​ನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಈತ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ದಾಳಿ ನಡೆದ ಸ್ಥಳಕ್ಕೆ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ.
ಕಂಪನಿ ಎಂಡಿ, ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
