ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕು ಪಸರಿಸುವ ವೇಗ ವಿಪರೀತವಾಗಿದ್ದು, ಸರ್ಕಾರ ಅನಿವಾರ್ಯವಾಗಿ ಕಠಿಣ ನಿಯಮಗಳನ್ನು ಹೇರಲು ನಿರ್ಧರಿಸಿ ಮಾರ್ಗಸೂಚಿ ಹೊರಡಿಸಿದೆ. ಶಾಲೆಗಳು ಪುನಃ ಬಾಗಿಲು ಮುಚ್ಚಲಿದ್ದು, ಯಾವುದೇ ತರಹದ ರ‌್ಯಾಲಿ, ಮುಷ್ಕರ, ಧರಣಿ ನಿಷೇಧಿಸಲಾಗಿದೆ. ಜತೆಗೆ ಜಿಮ್, ಈಜುಕೊಳವನ್ನೂ ಸಹ ಮುಚ್ಚಲು ಆದೇಶ ಹೊರಡಿಸಲಾಗಿದೆ.
ಪ್ರಕರಣ ವ್ಯಾಪಕವಾಗಿರುವ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಚಿತ್ರಮಂದಿರದ ಪ್ರೇಕ್ಷಕರ ಸಂಖ್ಯೆಯನ್ನು ಶೇ.50ಕ್ಕೆ ಮಿತಿಗೊಳಿಸಿದ್ದು, ಹೋಟೆಲ್‌ಗಳಿಗೂ ಸಹ ಮಿತಿಹಾಕಲಾಗಿದೆ. ಯುಗಾದಿ ಬಳಿಕ ನಡೆಯುವ ಸಾಲು ಸಾಲು ಹಬ್ಬ, ಜಾತ್ರೆಗಳು, ಸಭೆ ಸಮಾರಂಭಗಳಿಗೆ ಈಗ ಕರೊನಾ ಗ್ರಹಣ ಬಾಧಿಸುವುದು ನಿಚ್ಚಳವಾಗಿದೆ. ಶುಕ್ರವಾರ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರದ ಮುಖ್ಯಕಾರ್ಯದರ್ಶಿ, ನಿಯಮ ಪಾಲನೆಯ ಅನಿವಾರ್ಯತೆಯನ್ನು ಗಂಭೀರ ದನಿಯಲ್ಲಿ ಪ್ರಸ್ತಾಪಿಸಿದ್ದಾರೆ. ನಿಯಮಗಳನ್ನು ಯಾವುದೇ ವ್ಯಕ್ತಿ ಉಲ್ಲಂಸಿದ ಪಕ್ಷದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಐಪಿಸಿ ಸೆಕ್ಷನ್ 188ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರಂತೆ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಹಾಲ್‌ಗಳಲ್ಲಿ ಪರ್ಯಾಯ ಆಸನಗಳಲ್ಲಿ ಕೂರುವಂತೆ (ಒಂದು ಸೀಟು ಮತ್ತೊಂದು ಸೀಟಲ್ಲಿ ಕುಳಿತುಕೊಳ್ಳುವಂತೆ) ಗರಿಷ್ಠ ಶೇ.50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಇದೇ ಜಿಲ್ಲೆಗಳ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯು ಶೇ.50ರಷ್ಟು ಮೀರುವಂತಿಲ್ಲ.
ಕರೊನಾ ಕುರಿತ ಮುನ್ನೆಚ್ಚರಿಕೆಗಾಗಿ ಸೂಕ್ತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮುಖಗವಸು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್, ಹ್ಯಾಂಡ್ ವಾಷ್‌ಗಳ ಬಳಕೆಯನ್ನು ಜಾರಿಗೊಳಿಸಬೇಕಾದ್ದು ಸಂಬಂಧಪಟ್ಟವರ ಜವಾಬ್ದಾರಿ. ಈ ನಿಯಮ ಉಲ್ಲಂಸಿದ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳನ್ನು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುತ್ತದೆ. ಶಾಪಿಂಗ್ ಮಾಲ್‌ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರುಕಟ್ಟೆಗಳು, ಡಿಪಾರ್ಟ್‌ಮೆಂಟಲ್ ಸ್ಟೋರ್‌ಗಳಲ್ಲೂ ನಿಯಮ ಉಲ್ಲಂಘಿಸಿದರೆ ಸಾಂಕ್ರಾಮಿಕ ಕೊನೆಗೊಳ್ಳುವವರೆಗೆ ಮುಚ್ಚಲಾಗುತ್ತದೆ.



ಈ ಮಹಾನಗರದಲ್ಲಿ ಎತ್ತರದ ಕಟ್ಟಡಗಳಲ್ಲಿ ವಾಸಿಸುವವರಿಗಿಂತ ಕೊಳೆಗೇರಿ ನಿವಾಸಿಗಳೇ ವಾಸಿ!: ಹೀಗಂದಿದ್ಯಾರು, ಯಾಕೆ?

ಮಗಳು ರೇಪ್​ ಆರೋಪ ಹೊರಿಸಿದ್ದಕ್ಕೆ ಮನನೊಂದು ತಂದೆ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
