ಶಿವಮೊಗ್ಗ:ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು; ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು.
ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್​​ಗೆ ಸೂಚಿಸಿದರು. ಜತೆಗೆ ತಮ್ಮೊಡನಿದ್ದವರನ್ನೂ ಕಾರಿನಿಂದ ಇಳಿಸಿದರು. ಅಪಘಾತಕ್ಕೀಡಾದ ಕಾರನ್ನು ತಮ್ಮ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೇಲಕ್ಕೆತ್ತಿಸಿ, ಆ ಕುಟುಂಬ ಕಾರ್ಕಳಕ್ಕೆ ತೆರಳಲು ಸಹಾಯ ಮಾಡಿದರು. ಅಪಘಾತಕ್ಕೀಡಾದ ಕುಟುಂಬದವರಿಗೆ ಅದೃಷ್ಟವಶಾತ್​​ ಯಾವುದೇ ಹಾನಿಯಾಗಿರಲಿಲ್ಲ. ನಂತರ ಗೃಹ ಸಚಿವರು ಅವರೆಲ್ಲರಿಗೂ ಧೈರ್ಯ ತುಂಬಿ ಕಳುಹಿಸಿದರು.
ಸುಮಾರು ಒಂದು ವರ್ಷದ ಹಿಂದೆ ನಡೆದ ಅಪಘಾತ ಪ್ರಕರಣವೊಂದರಲ್ಲೂ ಗೃಹ ಸಚಿವರು ಮಾನವೀಯತೆ ತೋರಿದ್ದರು. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಮಾರ್ಗಮಧ್ಯದ ಮಂಡಗದ್ದೆ ಬಳಿ ಬೈಕ್​​ ಅಪಘಾತವಾಗಿತ್ತು. ಬೈಕ್​​ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನು ಗಮನಿಸಿದ ಗೃಹ ಸಚಿವರು ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಾವೇ ಗಾಯಾಳುಗಳಿಗೆ ನೀರು ಕುಡಿಸಿ ಉಪಚರಿಸಿದ್ದರು. ನಂತರ ಆ್ಯಂಬುಲೆನ್ಸ್​​ ಬರುವುದು ತಡವಾಗುತ್ತದೆಂದು, ತಮ್ಮ ಎಸ್ಕಾರ್ಟ್​ ವಾಹನದಲ್ಲೇ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
