ಬೆಂಗಳೂರು:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾತ್ರವಲ್ಲ, ಇವರೊಂದಿಗೆ 8 ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಆ ಪೈಕಿ ಒಬ್ಬರಾಗಿರುವ ಜಮೀರ್ ಅಹಮದ್ ಖಾನ್ ಇಂದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ:ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!
ನೂತನ ಸರ್ಕಾರದ ಸಂಪುಟದಲ್ಲಿ ಸೇರಿಕೊಳ್ಳುವ ಮೂಲಕ ಜಮೀರ್ ಅಹಮದ್ ಖಾನ್ ಮತ್ತೊಮ್ಮೆ ಸಚಿವರಾಗುವ ಅವಕಾಶ ಪಡೆದುಕೊಂಡಿದ್ದಾರೆ. ಅದಾಗ್ಯೂ ಹಳೇ ತಪ್ಪನ್ನು ಮತ್ತೊಮ್ಮೆ ಮಾಡಿ ಕನ್ನಡಿಗರ ತೀವ್ರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಇಂದು ಅವರು ಪ್ರಮಾಣವಚನವನ್ನು ಇಂಗ್ಲಿಷ್​ನಲ್ಲಿ ಸ್ವೀಕರಿಸಿದ್ದೇ ಇಷ್ಟಕ್ಕೆಲ್ಲ ಕಾರಣ.
ಇದನ್ನೂ ಓದಿ:ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?
ಹಾಗಂತ ಅವರು ಈ ತಪ್ಪು ಮಾಡಿದ್ದು ಇದೇ ಮೊದಲಲ್ಲ. ಅವರು ಮೊದಲ ಸಲ ಶಾಸಕರಾಗಿ, ಸಚಿವರಾಗಿದ್ದಲೂ ಇಂಗ್ಲಿಷ್​ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಆಗ ವಾಟಾಳ್ ನಾಗರಾಜ್, ಶ್ರೀರಾಮರೆಡ್ಡಿ ಸೇರಿದಂತೆ ಕನ್ನಡಪರ ಸಂಘಟನೆಗಳವರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೊನೆಗೆ ಸದನದಲ್ಲೇ ಕ್ಷಮೆ ಯಾಚಿಸಿದ್ದರು. ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದೆ ತಪ್ಪು ಮಾಡಿದೆ, ಕ್ಷಮಿಸಿ ಎಂದು ಕೈಮುಗಿದು ಕೇಳಿಕೊಂಡಿದ್ದರು.
2005ರಲ್ಲಿ@BZZameerAhmedKಜಮೀರ್ ಅಹಮದ್ ಖಾನ್ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿದ್ದರು. ಆಗ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ವಿಧಾನಸಭೆ ಕಲಾಪ ನಡೆಯುವಾಗ ಕರವೇ ಕಾರ್ಯಕರ್ತರು ಅಲ್ಲೇ ಕರಪತ್ರ ಎಸೆದು ಪ್ರತಿಭಟಿಸಿದಾಗ ನನ್ನಿಂದ ತಪ್ಪಾಗಿದೆ ಎಂದಿದ್ದರು. 18 ವರ್ಷ ಕಳೆದರೂ ಅವರು ಕನ್ನಡ ಕಲಿತಿಲ್ಲವೇ?pic.twitter.com/a14hOOJ23s— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru)May 20, 2023
2005ರಲ್ಲಿ@BZZameerAhmedKಜಮೀರ್ ಅಹಮದ್ ಖಾನ್ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿದ್ದರು. ಆಗ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ವಿಧಾನಸಭೆ ಕಲಾಪ ನಡೆಯುವಾಗ ಕರವೇ ಕಾರ್ಯಕರ್ತರು ಅಲ್ಲೇ ಕರಪತ್ರ ಎಸೆದು ಪ್ರತಿಭಟಿಸಿದಾಗ ನನ್ನಿಂದ ತಪ್ಪಾಗಿದೆ ಎಂದಿದ್ದರು. 18 ವರ್ಷ ಕಳೆದರೂ ಅವರು ಕನ್ನಡ ಕಲಿತಿಲ್ಲವೇ?pic.twitter.com/a14hOOJ23s
2005ರ ಈ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡ ಇಂದು ಸ್ಮರಿಸಿಕೊಂಡು, ಜಮೀರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಜಮೀರ್ ಅಹಮದ್​ ಖಾನ್ ಮೊದಲ ಸಲ ಶಾಸಕರಾಗಿ ಸಚಿವರಾಗಿದ್ದಾಗಲೂ ಇಂಗ್ಲಿಷ್​ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಅಂದು ವಿಧಾನಸಭೆ ಕಲಾಪ ನಡೆಯುವಾಗ ಕರವೇ ಕಾರ್ಯಕರ್ತರು ಅಲ್ಲೇ ಕರಪತ್ರ ಎಸೆದು ಪ್ರತಿಭಟಿಸಿದಾಗ ಜಮೀರ್​ ನನ್ನಿಂದ ತಪ್ಪಾಗಿದೆ ಎಂದಿದ್ದರು. 18 ವರ್ಷ ಕಳೆದರೂ ಅವರು ಕನ್ನಡ ಕಲಿತಿಲ್ಲವೇ?” ಎಂದು ನಾರಾಯಣ ಗೌಡ ಪ್ರಶ್ನೆ ಮಾಡಿದ್ದಾರೆ.
ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + 5 =
Remember me
