ಬೆಂಗಳೂರು:ಭೀಷ್ಮನಿಗೆ ವಯಸ್ಸಾಗಿದ್ದರೂ 10 ದಿನ ಯುದ್ಧ ಮಾಡಿದ. ಅದೇ ಕರ್ಣ ಒಂದೂವರೆ ದಿನ ಅಷ್ಟೇ ಯುದ್ಧ ಮಾಡಿದ. ನಾವು ಮಹಾಭಾರತದ ಘಟನೆ ನೆನಪಿಸಿಕೊಳ್ಳಬೇಕು ಎಂದು ಹೇಳಿದವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ.ಸಂದರ್ಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ.ರಾಜಕಾರಣದಲ್ಲಿ ವಯಸ್ಸು ಮುಖ್ಯವಲ್ಲ. ರಾಜಕಾರಣ, ಜನರ ಕೆಲಸ ಮಾಡಲು ಉತ್ಸಾಹ ಮುಖ್ಯ. ವಯಸ್ಸು ಇದೆ ಎಂದು ಮನೆಯಲ್ಲಿ ಮಲಗಿಕೊಂಡರೆ ಪ್ರಯೋಜನವೇನು? ಉತ್ಸಾಹದಲ್ಲಿ ಜನರ ಕೆಲಸ ಮಾಡುವುದು ಮುಖ್ಯ ಎಂದರು.
ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪರನ್ನು ಕೆಳಗಿಳಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಯಡಿಯೂರಪ್ಪ ಅವರನ್ನು ತೆಗೆಯುವಂತೆ ನಾವು ಹೇಳಿಲ್ಲ. ಕೇಂದ್ರದವರು 75 ವರ್ಷ ಆದ ಮೇಲೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪಗೆ ವಿಶೇಷ ಸಂದರ್ಭದಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದಾರೆ. ಬಳಿಕ ಕೇಂದ್ರದವರು ರಾಜೀನಾಮೆ ಕೊಡಲು ಹೇಳಿ, ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ. ಬೊಮ್ಮಾಯಿ ಎರಡು ವರ್ಷ ಪೂರೈಸಲು ನಮ್ಮಿಂದ ಯಾವುದೇ ತೊಂದರೆ ಇಲ್ಲ. ಎಲ್ಲರೂ ಮುಖ್ಯಮಂತ್ರಿ ಆಗಲೂ ಸಾಧ್ಯವಿಲ್ಲ ಎಂದು ದೇವೇಗೌಡರು ತಿಳಿಸಿದರು.
ಯಡಿಯೂರಪ್ಪ ಅವರನ್ನು ದೂರವಿಟ್ಟು ಸರ್ಕಾರ ರಚನೆ ಮಾಡುವುದು ಕಷ್ಟ. ಈ ಸರ್ಕಾರಕ್ಕೆ ಕಷ್ಟಕಾಲ ಬಂದರೆ ನಾನು ಸಪೋರ್ಟ್ ಮಾಡುತ್ತೇನೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆ ನಮಗೆ ಇಲ್ಲ. ಅವಧಿಗೂ ಮೊದಲೇ ಚುನಾವಣೆ ಬರುವುದಿಲ್ಲ ಎಂದು ದೇವೇಗವಡರು ಹೇಳಿದರು.
ನೂತನ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾದರು. ಅವರ ನಿವಾಸಕ್ಕೆ ತೆರಳಿ ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಗೆ ಸಾಥ್ ಕೊಟ್ಟರು.
ಎಸ್.ಆರ್.ಬೊಮ್ಮಾಯಿ ನಾನು ಒಟ್ಟಿಗೆ ಕೆಲಸ ಮಾಡಿದ್ದೆವು. ಅವರ ಜತೆಗೆ ನಾವಿದ್ದೆವು. ಅವರ ತಂದೆ ನಾವು ಹೇಗೆ ಕೆಲಸ ಮಾಡಿದ್ದೇವೆ ಎಂಬ ಬಗ್ಗೆ ಬಸವರಾಜಗೂ ತಿಳಿದಿದೆ. ಬಸವರಾಜ ಬೊಮ್ಮಾಯಿ ಕೂಡ ನಮ್ಮ ಜತೆ ಕೆಲಸ ಮಾಡಿದ್ದಾರೆ.|ಎಚ್.ಡಿ.ದೇವೇಗೌಡಮಾಜಿ ಪ್ರಧಾನಿ.
ನಾನು ದೇವೇಗೌಡರ ಗರಡಿಯಲ್ಲೇ ಬೆಳೆದವನು. ನನ್ನ ತಂದೆ ಎಸ್.ಆರ್. ಬೊಮ್ಮಾಯಿ ಜತೆ ಮಾಜಿ ಪ್ರಧಾನಿ ದೇವೇಗೌಡರು ಒಡನಾಟ ಹೊಂದಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಕ್ಕೆ ಸಾಕಷ್ಟು ಖುಷಿಯಿಂದ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಪತ್ನಿ ಚನ್ನಮ್ಮ ತಾಯಿಯ ಆಶೀರ್ವಾದ ಕೂಡ ಪಡೆದಿದ್ದೇನೆ. ದೇವೇಗೌಡರು ಸಾಕಷ್ಟು ಹಿರಿಯರು, ಅನುಭವಿಗಳು ಆಡಳಿತಕ್ಕೆ ಸಹಕಾರ ನೀಡುವುದಾಗಿ ಹೇಳಿದ್ದಾರೆ.|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ.




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − three =
Remember me
