ಬೆಂಗಳೂರು:ರಾಜ್ಯದ ಶಿಕ್ಷಣ ಇಲಾಖೆಯು ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಾತಿಗೆ ವಯೋಮಿತಿ ನಿಗದಿ ಮಾಡಿದ್ದು, ಆ ಪ್ರಕಾರ ಎಲ್‌ಕೆಜಿ ತರಗತಿಗೆ ಪ್ರವೇಶ ಕಲ್ಪಿಸಲು ಜೂನ್ 1ಕ್ಕೆ ಅನ್ವಯವಾಗುವಂತೆ 4 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಿದೆ.
ಶಿಕ್ಷಣ ಹಕ್ಕು ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷದ ಜೂ.1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ.
ಇದನ್ನೂ ಓದಿ:ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್​ಗೆ ಬಂಧನ ಭೀತಿ
ಈ ನಿಯಮವನ್ನು ರಾಜ್ಯದಲ್ಲಿ 2025-26ನೇ ಸಾಲಿನಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಈಗಾಗಲೇ ಆದೇಶ ಹೊರಡಿಸಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್‌ಕೆಜಿ ತರಗತಿಗೆ ದಾಖಲಾಗಿ ಹೊಂದಲು 2023ರ ಜೂ.1ಕ್ಕೆ ಅನ್ವಯವಾಗುವಂತೆ 4 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಿ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದಾರೆ.
ಸರ್ಕಾರ ನಿಗದಿ ಮಾಡಿರುವ ವಯೋಮಿತಿಯನ್ನು ಪಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಲಾ ಪ್ರವೇಶಾತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದರಿಂದ ಸಾಕಷ್ಟು ಸಮಸ್ಯೆಯಾಗಲಿದೆ. ಜೂನ್ ಮತ್ತು ಜುಲೈನಲ್ಲಿ ಜನಿಸಿರುವ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಮತ್ತೊಂದು ವರ್ಷ ವ್ಯರ್ಥವಾಗಿ ಕಾಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಹಿಂದೆ ಇದ್ದ 5.5 ವರ್ಷದಿಂದ 7 ವರ್ಷಗಳ ವಯೋಮಿತಿಯು ವೈಜ್ಞಾನಿಕವಾಗಿದೆ. ಈಗ ರೂಪಿಸಿರುವ ನಿಯಯವು ಅವೈಜ್ಞಾನಿಕವಾಗಿದ್ದು, ಮಕ್ಕಳ ಸ್ನೇಹಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 6 =
Remember me
