ಬೆಂಗಳೂರು:ಇಂದು ದೇಶ ಮಧ್ಯದಲ್ಲಿ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದರೆ ಅದಕ್ಕೆ ಕಾರಣ ನಮಗೋಸ್ಕರ ಮತ್ತಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡುತ್ತಿದ್ದಾರೆ; ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡುತ್ತಿದ್ದಾರೆ ಎಂದರ್ಥ. ಸಮವಸ್ತ್ರ ತೊಟ್ಟು ಹೋರಾಡುತ್ತಿರುವ ಯೋಧರು ಒಂದು ಕಡೆಯಾದರೆ, ತಾವು ಯಾರು ಅನ್ನೋದನ್ನು ಹೊರ ಜಗತ್ತಿಗೂ ಹೇಳದೇ, ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡುತ್ತಿರುವವರು ಮತ್ತೊಂದು ಕಡೆ. ಹುಟ್ಟಿದ ಊರು ಬಿಟ್ಟು ಯಾವುದೋ ದೇಶದಲ್ಲಿ ಗೂಡಚಾರಿಗಳಾಗಿ ಕೆಲಸ ಮಾಡುತ್ತಾ ದೇಶಸೇವೆ ಮಾಡುತ್ತಿರುವವರ ಸೇವೆಗೆ ಸರಿಸಾಟಿ ಇಲ್ಲ. ಪ್ರತಿಕ್ಷಣವೂ ಸವಾಲಿನಂತಿರುವ ಸನ್ನಿವೇಶದಲ್ಲಿ ಬದುಕಿದ ಸೀಕ್ರೆಟ್ ಏಜೆಂಟ್‌ಗಳ ಕುರಿತ ವಿಶೇಷ ಸರಣಿ ಕಾರ್ಯಕ್ರಮವೊಂದು ಇಂದಿನಿಂದ ನ್ಯೂಸ್‌ಫಸ್ಟ್ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಏಜೆಂಟ್ 001 ಹೆಸರಿನ ಈ ಕಾರ್ಯಕ್ರಮ ಪ್ರತಿ ಶನಿವಾರ ಸಂಜೆ 7 ಗಂಟೆಗೆ ಹಾಗೂ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ಕಾರ್ಯಕ್ರಮ ಇದಾಗಿದೆ.
ಹಲವು ಪುಸ್ತಕಗಳು ಹಾಗೂ ದಾಖಲೆಗಳನ್ನು ಅಧ್ಯಯನ ಮಾಡಿ ನಿಖರ ಮಾಹಿತಿ ಸಂಗ್ರಹಿಸಿ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿ ಅತ್ಯುತ್ತಮ ಗುಣಮಟ್ಟದಲ್ಲಿ ಕಾರ್ಯಕ್ರಮವನ್ನು ನಿರ್ಮಾಣ ಮಾಡಲಾಗಿದೆ ಎಂದು ಆಯೋಜಕರು ಹೇಳಿಕೊಂಡಿದ್ದಾರೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಕುತೂಹಲ ಮತ್ತು ರೋಮಾಂಚನಗೊಳಿಸುವ ವಿಷಯಗಳನ್ನು ಈ ಕಾರ್ಯಕ್ರಮ ಒಳಗೊಂಡಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ಹೊಸ ವಿಷಯಗಳನ್ನ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಈ ಮೊದಲು ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಸಾರವಾದ ‘ದಿ ಲೀಡರ್’ ಎಂಬ ವಿಶೇಷ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಸಾಧಿಸಿತ್ತು. ರಾಜಕೀಯ ರಹಿತವಾಗಿ ದೇಶ ಕಟ್ಟಿದ್ದ ಪ್ರಧಾನಮಂತ್ರಿಗಳು, ಅವರು ಎದುರಿಸಿದ ಸವಾಲುಗಳು, ಮಾಡಿದ ಸಾಧನೆ ಕುರಿತು ಚಿತ್ರಿಸಲಾಗಿದ್ದ ದಿ ಲೀಡರ್ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ನ್ಯೂಸ್‌ಫಸ್ಟ್ನ ಎಂಡಿ ಹಾಗೂ ಸಿಇಒ ಎಸ್.ರವಿಕುಮಾರ್ ದಿ ಲೀಡರ್ ಕಾರ್ಯಕ್ರಮದ ನಿರೂಪಣೆ ಮಾಡಿದ್ದರು. ಈಗ ಏಜೆಂಟ್ 001 ಕಾರ್ಯಕ್ರಮವನ್ನ ಸಹ ಅವರೇ ನಿರೂಪಣೆ ಮಾಡುತ್ತಿರುವುದು ವಿಶೇಷ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − six =
Remember me
