ಬೆಂಗಳೂರುಮಂಗಳೂರಿನ ಸೇನಾ ನೇಮಕಾತಿ ಕಚೇರಿಯು ಇದೇ 22ರಿಂದ 31ರವರೆಗೆ ಶಿವಮೊಗ್ಗದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ Rally ನಡೆಸುತ್ತಿದೆ.
ರಾಜ್ಯದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ರ‌್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ.
ಏ.22ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ನಂತರ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ರ‌್ಯಾಲಿಯನ್ನು ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮೆನ್ (10 ನೇ ಪಾಸ್), ಅಗ್ನಿವೀರ್ ಟ್ರೇಡ್ಸ್‌ಮೆನ್ (8 ನೇ ಪಾಸ್) ಮತ್ತು ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್ ನೋಂದಣಿಗಾಗಿ ನಡೆಸಲಾಗುತ್ತಿದೆ.ರ‌್ಯಾಲಿಯನ್ನು ಸುಗಮವಾಗಿ ನಡೆಸಲು ನಾಗರಿಕ ಆಡಳಿತವು ಪೂರ್ವಭಾವಿಯಾಗಿ ಎಲ್ಲ ಅಗತ್ಯ ಸಹಾಯವನ್ನು ಒದಗಿಸಲಾಗಿದೆ. ಹೊರ ರಾಜ್ಯಗಳ ಅಭ್ಯರ್ಥಿಗಳಿಗೆ ವಸತಿಯನ್ನು ನಾಗರಿಕ ಆಡಳಿತವು ಏರ್ಪಡಿಸುತ್ತಿದೆ
ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಈಗಾಗಲೇ ಅವರ ನೋಂದಾಯಿತ ಇ-ಮೇಲ್ ಐಡಿಗೆ ಕಳುಹಿಸಲಾಗಿದೆ. ಅವರ ಬಳಕೆದಾರ ಹೆಸರು ಮತ್ತು ಪಾಸ್‌ವರ್ಡ್ ಮೂಲಕ ಲಾಗಿನ್ ಆದ ಮೇಲೆ ಭಾರತೀಯ ಸೇನೆಯ ಸೇರ್ಪಡೆ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + sixteen =
Remember me
