ಬೆಂಗಳೂರು:ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ವಿಷಯಗಳ ಕುರಿತು ಇಂದು ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಹೈದರಾಬಾದ್‌ನ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಮಹತ್ವದ ಒಡಂಬಡಿಕೆಗೆ ಸಹಿ ಮಾಡಿವೆ. ವಿಕಾಸ ಸೌಧದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಕರ್ನಾಟಕ ರಾಜ್ಯ ಬೀಜ ನಿಗಮ ರೈತರಿಗೆ ವರ್ಷಕ್ಕೆ ಸರಾಸರಿ 3.50 ಲಕ್ಷ ಕ್ವಿಂಟಲ್ ಬೀಜ ಸರಬರಾಜು ಮಾಡುತ್ತಿದ್ದು, ಉತ್ತಮ ಗುಣಮಟ್ಟದ ಬೀಜ ಪೂರೈಕೆ ಸೌಲಭ್ಯಗಳನ್ನು ಹೊಂದಿದೆ.
ಐಸಿಆರ್‌ಐಎಸ್‌ಐಟಿ ಒಂದು ಅಂತಾರಾಷ್ಟ್ರೀಯ ಬೆಳೆ ತಳಿ ಸಂಶೋಧನಾ ಕೇಂದ್ರವಾಗಿದ್ದು ಹೊಸ ತಂತ್ರಜ್ಞಾನದ ಮೂಲಕ ಅರೆ ಶುಷ್ಕ ವಾತಾವರಣಕ್ಕೆ ಹೊಂದಿಕೊಳ್ಳುವ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಪರಿಚಯಿಸುತ್ತಿದೆ. ಈಗಾಗಲೇ ಈ ಸಂಸ್ಥೆಯು ಅಭಿವೃದ್ಧಿಪಡಿಸಿದ ಶೇಂಗಾ, ತೊಗರಿ, ಜೋಳ, ಕಡಲೆ ಮತ್ತು ಸಜ್ಜೆ ತಳಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಚಲಿತದಲ್ಲಿವೆ.
ಈ ಒಡಂಬಡಿಕೆಯಿಂದ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಐಸಿಆರ್‌ಐಎಸ್‌ಎಟಿ ಸಂಸ್ಥೆಯ ಹೊಸ ತಳಿಗಳು ಲಭ್ಯವಾಗಲಿದ್ದು ಸಂಸ್ಥೆಯ ಉತ್ಪನ್ನಗಳ ಪಟ್ಟಿ ಬಲಿಷ್ಠವಾಗುತ್ತದೆ. ಇದರಿಂದ ರೈತರಿಗೆ ತೊಗರಿ, ಕಡಲೆ, ಜೋಳ, ಸಜ್ಜೆ, ಮತ್ತು ಸಿರಿಧಾನ್ಯಗಳಲ್ಲಿ ಹೊಸ ಶಕ್ತಿ ವರ್ಧಕ ತಳಿಗಳನ್ನು ಪರಿಚಯಿಸಲು ಅನುಕೂಲವಾಗುತ್ತದೆ. ಈ ಹೊಸ ತಳಿಗಳನ್ನು ಕೆಎಸ್‌ಎಸ್‌ಸಿ ತಳಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಧಾರವಾಡದಲ್ಲಿ ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಮೌಲ್ಯವೀಕರಣ ಮಾಡಿ ವಿವಿಧ ಬೆಳೆಗಳಲ್ಲಿ ಹೊಸ ತಳಿ ಬಿಡುಗಡೆ ಮಾಡಲು ಸಹಾಯವಾಗುತ್ತದೆ.
ಒಟ್ಟು ಮೂರು ವರ್ಷಗಳ ಒಡಂಬಡಿಕೆಯ ಅವಧಿಯಲ್ಲಿ ಬರ ಮತ್ತು ರೋಗ ನಿರೋಧಕ ತಳಿಗಳನ್ನು ರಾಜ್ಯದ ರೈತರಿಗೆ ತ್ವರಿತವಾಗಿ ತಲುಪಿಸಲು ಉಪಯೋಗವಾಗುತ್ತದೆ. ಹಾಗೂ ಈ ಬೆಳೆಗಳಲ್ಲಿ ರಾಜ್ಯದ ಸರಾಸರಿ ಉತ್ಪಾದಕತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್.ದೇವರಾಜ, ಹೈದರಾಬಾದ್ ಐಸಿಆರ್‌ಐಎಸ್‌ಎಟಿ ಉಪ ಮಹಾ ನಿರ್ದೇಶಕ ಡಾ. ಅರವಿಂದ ಕುಮಾರ್ ಈ ಒಡಂಬಡಿಕೆಗೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬು ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ವಿ.ಆರ್.ಡಿ.ಸಿ, ಮುಖಸ್ಥ ಡಾ. ವಿ.ಎಸ್.ಸಂಗಮ, ಧಾರವಾಡ ಹಾಗೂ ಐಸಿಆರ್‌ಐಎಸ್‌ಟಿ ಮುಖ್ಯ ಸಂಶೋಧಕ ಡಾ. ಪ್ರಕಾಶ ಗಂಗಶೆಟ್ಟಿ, ಡಾ.ಅಶೋಕ ಕುಮಾರ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
