ಧಾರವಾಡ:ರೈತರಿಗೆ, ಹಳ್ಳಿಯಲ್ಲಿರುವ ಯುವಕರಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ ಎಂಬ ಕೂಗು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ರೈತರನ್ನು ವಿವಾಹವಾಗಲು ಯುವತಿಯರು ಹಿಂದೇಟು ಹಾಕುತ್ತಿರುವುದು, ಪ್ರಸ್ತುತ ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ ಎಂದರೆ ತಪ್ಪಲ್ಲ.
ಇದೀಗ ರೈತರ ಮಕ್ಕಳಿಗೆ ಹೆಣ್ಣು ಕೊಡದಿರುವ ವಿಚಾರವಾಗಿ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ 36ನೇ ಘಟಿಕೋತ್ಸವದ ಬಳಿಕ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಳ್ಳಿಯಲ್ಲಿ ರೈತರ ಮಕ್ಕಳಿಗೆ ಅಂತಲ್ಲ, ದುಡಿಮೆ ಇಲ್ಲದವರಿಗೆ ಹೆಣ್ಣು ಕೊಡುವುದಿಲ್ಲ. ಸೂಕ್ತ ಉದ್ಯೋಗ ಇಲ್ಲದಿರುವುದರಿಂದ ಮದುವೆಯಾಗಲು ಹೆಣ್ಣು ಸಿಗದೆ ಸಮಸ್ಯೆಯಾಗುತ್ತಿದೆ. ಆದರೆ ಈಗ ಕೃಷಿಯಲ್ಲಿಯೂ ಅನೇಕ ಲಾಭದಾಯಕ ರೈತರಿದ್ದಾರೆ. ಹಾಗಂತ ಎಲ್ಲಾ ರೈತರೂ ಲಾಭದಾಯಕ ಸ್ಥಾನದಲ್ಲಿ ಇದ್ದಾರೆ ಎಂದಲ್ಲ. ಹೀಗಾಗಿ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಇಂಜೆಕ್ಷನ್ ಅಂದ್ರೆ ಡಿಕೆಶಿಗೆ ಭಯವಂತೆ!
ನಾವು ಕೃಷಿಯನ್ನು ಉದ್ಯಮವಾಗಿ ಬೆಳಸುವ ಚಿಂತನೆ ಮಾಡಿದ್ದೇವೆ. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ಪ್ರೋತ್ಸಾಹ ಕೊಡಲಿದೆ. ಮುಂಗಾರು ಮಳೆ ವಿಳಂಬವಾದ ಹಿನ್ನೆಲೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ವರ್ಷಕ್ಕಿಂತ ಶೇ.30ರಷ್ಟು ಮಳೆ ಕಡಿಮೆಯಾಗಿದೆ. ಮಳೆ ನಿರೀಕ್ಷೆ ಮಾಡುತ್ತಿದ್ದು, ಬೀಜ-ರಸಗೊಬ್ಬರ ಸಂಗ್ರಹಿಸಿ ಇಟ್ಟುಕೊಂಡಿದ್ದೇವೆ. ಆದರೆ ಮುಂಗಾರು ವಿಳಂಬದಿಂದ ಏನೂ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 8 =
Remember me
