ಬೆಂಗಳೂರು:ಆಹಾರ ಉತ್ಪಾದನೆ ಹೆಚ್ಚಿಸಲು ಗುಣಮಟ್ಟದ ಬಿತ್ತನೆ ಬೀಜಗಳನ್ನು ಉತ್ಪಾದಿಸುವತ್ತ ಹೆಚ್ಚಿನ ನಿಗಾ ವಹಿಸುವಂತೆ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬೀಜ ದಿನ – 2023’ ಉದ್ಘಾಟಿಸಿ ಮಾತನಾಡಿದ ಅವರು ಬಿತ್ತನೆ ಬೀಜಗಳನ್ನು ಉತ್ಪಾದಿಸುವತ್ತ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದ್ದಾರೆ.
ಹೆಚ್ಚು ಇಳುವರಿ ನೀಡುವ ಹಾಗೂ ಹೊಸ ತಳಿಗಳನ್ನು ಸಂಶೋಧಿಸಿ ರೈತರಿಗೆ ತಲುಪಿಸಬೇಕು. ಹೊಸ ತಾಂತ್ರಿಕತೆಯನ್ನು ರೈತಾಪಿ ವರ್ಗಕ್ಕೆ ವರ್ಗಾಯಿಸಬೇಕು. ರೈತರು ಹೆಚ್ಚು ಶ್ರಮವಹಿಸಿ ದುಡಿಯುತ್ತಿದ್ದರೂ, ದೇಶದಲ್ಲಿ ಸ್ವಲ್ಪಮಟ್ಟಿಗೆ ಆಹಾರ ಕೊರತೆ ಉಂಟಾಗುವ ಲಕ್ಷಣ ಗೋಚರಿಸುತ್ತಿದೆ. ಇದಕ್ಕೆ ಆಸ್ಪದ ನೀಡದಿರಲು ಕೃಷಿ ವಿಜ್ಞಾನಿಗಳು ಹಾಗೂ ವಿಶ್ವವಿದ್ಯಾಲಯಗಳು ರೈತರ ಬೆನ್ನೆಲುಬಾಗಿ ಸದಾ ಇರಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.
ಇತ್ತೀಚಿಗೆ ವಿದ್ಯಾವಂತ ಮಹಿಳೆಯರು, ಪುರುಷರು ಅನ್ಯ ಉದ್ಯೋಗ ಬಿಟ್ಟು ಕೃಷಿಯಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. ಇಂತಹವರಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ. ವಿಶ್ವವಿದ್ಯಾಲಯಗಳು ಹಾಗೂ ಇಲಾಖೆ ಕೃಷಿಯಲ್ಲಿ ಆದಾಯ ಹೆಚ್ಚಾಗುವ ದಿಕ್ಕಿನಲ್ಲಿ ಇವರಿಗೆ ಸಹಾಯ ಮಾಡಬೇಕು.
ಹವಾಮಾನ ವೈಪರೀತ್ಯದಿಂದ ಬೆಳೆಹಾನಿಯಾಗಿ ಆರ್ಥಿಕ ನಷ್ಟವನ್ನು ರೈತರು ಒಳಗಾಗುತ್ತಿದ್ದಾರೆ. ಉತ್ತಮ ಬೆಳೆಗೆ ಮಾರುಕಟ್ಟೆ ದರ ಸಿಗುವುದಿಲ್ಲ ಎಂಬ ಆಕ್ಷೇಪವೂ ಇದೆ. ಇದನ್ನು ಮನಗಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿ ನಿಲ್ಲಲು ಕಟಿಬದ್ಧವಾಗಿವೆ ಎಂದು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ:ಗಾಯಾಳುವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಗೆ ಬೆಂಕಿ ಇಟ್ಟ ಬಂಡುಕೋರರು; ಮೂವರು ಸಜೀವ ದಹನ
ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧಿಕಾರದ ಸಿಇಒ ಡಾ. ಅಶೋಕ್ ದಳವಾಯಿ ಮಾತನಾಡಿ, ಪ್ರಸ್ತುತ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಆದರೂ ಜನಸಂಖ್ಯೆಗೆ ಅನುಗುಣವಾಗಿ ಭವಿಷ್ಯದಲ್ಲಿ ಆಹಾರ ಉತ್ಪಾದನೆ ಸವಾಲು ಎದುರಾಗಲಿದೆ.
ಇದನ್ನು ಮನಗಂಡು ಹಾಲಿ ಶೇ.55 ಬಿತ್ತನೆ ಬೀಜಗಳ ಕೊರತೆಯನ್ನು ನಿವಾರಿಸಿಕೊಳ್ಳಲು ಎಲ್ಲರೂ ಉತ್ತಮವಾದ ಬೀಜ ಉತ್ಪಾದನೆಗೆ ಗಮನ ನೀಡಬೇಕು. ದೇಸಿ ತಳಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಮುಂದಾದಲ್ಲಿ ಅದಕ್ಕೆ ಕೇಂದ್ರದಿಂದ ನೆರವು ಕೊಡಿಸಲು ಬದ್ಧ ಎಂದು ಭರವಸೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ವಿವಿಯ ಸಂಶೋಧನಾ ನಿರ್ದೇಶಕ ಡಾ.ಕೆ.ಬಿ. ಉಮೇಶ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
