ಬೆಂಗಳೂರು:ಅಗ್ರಿಗೋಲ್ಡ್ ಹಗರಣದಲ್ಲಿ ಠೇವಣಿದಾರರಿಗೆ ಹಣ ವಾಪಸ್ ಕೊಡಿಸಲು ಆ ಸಂಸ್ಥೆಯ ನಿರ್ದೇಶಕರ ಆಸ್ತಿಗಳನ್ನು ಜಪ್ತಿ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ, ಅಗ್ರಿಗೋಲ್ಡ್ ಸಂಸ್ಥೆ ಸಾರ್ವಜನಿಕರಿಂದ ಏಜೆಂಟರ ಮೂಲಕ ಠೇವಣಿ ಸಂಗ್ರಹ ಮಾಡಿ ಲಾಭಾಂಶ ಅಥವಾ ಬಡ್ಡಿ ಕೊಟ್ಟಿಲ್ಲ. ನೂರಾರು ಠೇವಣಿದಾರರು ಈಗಲೂ ಅಲೆದಾಡುತ್ತಿದ್ದಾರೆ. ಸಿಐಡಿ ತನಿಖೆ ನಡೆಯುತ್ತಿದೆ. 1500 ಕೋಟಿ ರೂ. ಠೇವಣಿಯನ್ನು ವೈಯಕ್ತಿಕವಾಗಿ ಬಳಸಿ ದುರ್ಬಳಕೆ ಮಾಡಿದ್ದಾರೆ ಎಂದರು. ಈ ಮುನ್ನ ಪ್ರಕರಣದ ಬಗ್ಗೆ ವಿವರಿಸಿದ ಶಾಸಕ ಬಳ್ಳಾರಿ, 2014-15ರಲ್ಲಿ ಅಗ್ರಿಗೋಲ್ಡ್ ಹಗರಣ ನಡೆದಿದೆ.
84,616 ಮಂದಿ ಠೇವಣಿ ಇಟ್ಟಿದ್ದಾರೆ. ಅಗ್ರಿಗೋಲ್ಡ್ ಮಾಲೀಕರು ಆಂಧ್ರಪ್ರದೇಶ, ತೆಲಂಗಾಣದಲ್ಲಿ 16 ಸಾವಿರ ಎಕರೆಗೂ ಹೆಚ್ಚಿನ ಭೂಮಿ ಹೊಂದಿದ್ದಾರೆ. ಬೆಂಗಳೂರಿನಲ್ಲೇ 250 ಎಕರೆ ಭೂಮಿ ಅವರ ಹೆಸರಿನಲ್ಲಿದೆ. ಈ ಆಸ್ತಿ ಮುಟ್ಟುಗೋಲು ಹಾಕಿ ಠೇವಣಿದಾರರಿಗೆ ನಷ್ಟದ ಪರಿಹಾರ ಕೊಡಿಸುವ ಕೆಲಸ ನಡೆದಿಲ್ಲ ಎಂದರು. ಠೇವಣಿ ಸಂಗ್ರಹಿಸಲು ಕೆಲಸ ಮಾಡಿದ 170 ಸಿಬ್ಬಂದಿ ಪರದಾಡುತ್ತಿದ್ದಾರೆ. ಕೆಲ ಏಜೆಂಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
VIDEO| ಆಸ್ಪತ್ರೆಯಿಂದ ಬಂದ ಪತಿಯನ್ನು ಡ್ಯಾನ್ಸ್​ ಮಾಡಿ ಸ್ವಾಗತಿಸಿದ ಪತ್ನಿ; ವೃದ್ಧ ದಂಪತಿಯ ಪ್ರೀತಿಗೆ ನೆಟ್ಟಿಗರು ಫಿದಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
