ಶಿವಮೊಗ್ಗ:ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಪ್ರಮುಖ ಸಂಪರ್ಕದ ಕೊಂಡಿಯಾಗಿರುವ ಆಗುಂಬೆ ಘಾಟ್​​ ರಸ್ತೆ ದುರಸ್ತಿಗಾಗಿ 10 ದಿನಗಳ ಕಾಲ ಸಂಚಾರ ಬಂದ್ ಮಾಡಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಆಗುಂಬೆ ರಸ್ತೆಯು ರಾಷ್ಟ್ರೀಯ ಹೆದ್ದಾರಿ 169(ಎ) ಆಗಿದ್ದು, ಘಾಟ್​​ನಲ್ಲಿ ರಸ್ತೆ ದುರಸ್ತಿ ಮಾಡುವ ಸಲುವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ವಿಭಾಗದ ಕಾರ್ಯಪಾಲಕ ಇಂಜಿನಿಯರ್, ಜಿಲ್ಲಾ ಎಸ್​​ಪಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಶಿಫಾರಸಿನ ಮೇರೆಗೆ ರಸ್ತೆ ಸಂಚಾರವನ್ನು ಮಾರ್ಚ್ 5ರಿಂದ ಮಾರ್ಚ್ 15ರ ತನಕ ಬೆಳಗ್ಗೆ 7ರಿಂದ ಸಂಜೆ 7ರ ತನಕ ಬಂದ್​ ಮಾಡಲಾಗುತ್ತಿದೆ.
ಪರ್ಯಾಯ ಮಾರ್ಗ:ಲಘು ವಾಹನಗಳು ತೀರ್ಥಹಳ್ಳಿಯಿಂದ ಕೊಪ್ಪ ಮಾರ್ಗವಾಗಿ ಶೃಂಗೇರಿ ಮಾಳಘಾಟ್, ಕಾರ್ಕಳದ ಮೂಲಕ ಉಡುಪಿಯ ರಾಷ್ಟ್ರೀಯ ಹೆದ್ದಾರಿ ತಲುಪಬಹುದಾಗಿದೆ. ಭಾರಿ ವಾಹನಗಳು ಶಿವಮೊಗ್ಗದಿಂದ ಆಯನೂರು-ಆನಂದಪುರ, ಸಾಗರದಿಂದ ಹೊನ್ನಾವರ ಮೂಲಕ ಸಂಚರಿಸಲು ಆದೇಶಿಸಲಾಗಿದೆ.
ನಾಳೆಯ ಬಜೆಟ್’ಅನ್ನು ಕನ್ನಡ ಚಿತ್ರರಂಗ ಯಾವತ್ತೂ ಮರೆಯೋದಿಲ್ಲ: ಮುನಿರತ್ನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + fourteen =
Remember me
