ಶಿವಮೊಗ್ಗ:ಕಾಡಿನ‌ ನಡುವೆ ಇರುವ ಆಗುಂಬೆಯ ಘಾಟಿಯ ಏಳನೆಯ ತಿರುವಿನಲ್ಲಿ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ರಾತ್ರಿ ಒಂಭತ್ತೂವರೆ ಸಮಯದಲ್ಲಿ ಕಾರೊಂದು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿರುವಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿರುವುದನ್ನು ನೋಡಿ ಕಾರು ಚಾಲಕ ತಕ್ಷಣ ಇಳಿದು ಮಗುವನ್ನು ಕರೆದುಕೊಂಡು ಹೋಗಿ ಆಗುಂಬೆ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪಾಲಕರು ಯಾರು ಎಂದು ಪೋಲಿಸರು ಪತ್ತೆಹಚ್ಚಲು ಮುಂದಾದಾಗ ಪಾಲಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ಮೂಲದವರಾದ ಬೀನು ಎಂಬುವವರು ಕುಟುಂಬ ಸಮೇತರಾಗಿ ಕೇರಳ ಮತ್ತು ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಪ್ರವಾಸದಿಂದ ವಾಪಸ್ಸು ಬರುವಾಗ ರಾತ್ರಿ ಸಮಯವಾಗಿದ್ದರಿಂದ ಗಾಡಿಯಲ್ಲಿ ಪಾಲಕರು ನಿದ್ರೆಗೆ ಜಾರಿದ್ದರು. ಹಿಂದಿನ ಡೋರ್ ಅಚಾನಕ್ ತೆರೆದಿದ್ದರಿಂದ ಮಗು ಏಳನೆಯ ಕ್ರಾಸ್​ನಲ್ಲಿ ಹೊರಗೆ ಬಿದ್ದಿದೆ. ಆದರೆ ಪಾಲಕರು ನಿದ್ರೆಯಲ್ಲಿದ್ದರಿಂದ ಮಗು ಬಿದ್ದಿರುವುದು ತಿಳಿಯಲಿಲ್ಲ. ಗಾಡಿ ಹಾಗೆಯೇ ಮುಂದೆ ಚಲಿಸಿದೆ.
ಎನ್‌.ಆರ್.ಪುರ ಹೋಗುವಾಗ ಮಾರ್ಗ ಮಧ್ಯೆ ಕೊಪ್ಪ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡ ಪಾಲಕರು ಮಗು ಆನ್ವಿ ಗಾಡಿಯಲ್ಲಿ ಇಲ್ಲದಿರುವುದನ್ನು ಗಮನಿಸಿ ಗಾಬರಿಗೊಂಡು ತಕ್ಷಣ ಅದೇ ಮಾರ್ಗವಾಗಿ ಹಿಂದಿರುಗಿ ಮಗುವನ್ನು ಹುಡುಕುತ್ತಾ ಬಂದಿದ್ದಾರೆ. ಬರುವಾಗ ಆಗುಂಬೆ ಫಾರೆಸ್ಟ್ ಗೇಟ್‌ನಲ್ಲಿ ಮಗು ಠಾಣೆಯಲ್ಲಿ ಇರುವ ವಿಷಯ ಗೊತ್ತಾಗಿದೆ. ವಿಷಯ ತಿಳಿದ ಪಾಲಕರು ಠಾಣೆಗೆ ತೆರಳಿದ್ದಾರೆ. ಪೊಲೀಸರು ತಂದೆ-ತಾಯಿಗೆ ಎಚ್ಚರಿಕೆ ನೀಡಿ ಮಗುವನ್ನು ಪಾಲಕರಿಗೆ ಒಪ್ಪಿಸಿದ್ದಾರೆಂದು ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
