ಬೆಂಗಳೂರುರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು (ಆರ್‌ಜಿಯುಎಚ್‌ಎಸ್) ಪರೀಕ್ಷಾ ಅಕ್ರಮ ತಡೆಯುವುದಕ್ಕಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಪರಿಚಯಿಸುತ್ತಿದೆ.
ಎಐ ತಂತ್ರಜ್ಞಾನವು ಪರೀಕ್ಷಾ ಕೊಠಡಿಗಳಲ್ಲಿರುವ ಅಭ್ಯರ್ಥಿಗಳ ಚಲನವಲನಗಳು, ಪಿಸುಮಾತಿನಲ್ಲಿ ಮಾತನಾಡುವ ಮಾತುಗಳು ಹಾಗೂ ಅಕ್ರಮವಾಗಿ ಅಭ್ಯರ್ಥಿಯು (ಬದಲಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿದ್ದರೆ) ಪರೀಕ್ಷೆ ಬರೆಯುತ್ತಿದ್ದರೆ ಪತ್ತೆ ಹಚ್ಚಲಿದೆ. ಇದಕ್ಕಾಗಿ ವಿವಿಯು ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬದಲಾವಣೆ ಮಾಡಿ ಅತ್ಯಾಧುನಿಕ ಹಾಗೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತಹ ಸಿಸಿಟಿವಿಗಳನ್ನು ಅಳವಡಿಸುವ ಕಾರ್ಯವನ್ನು ಆರಂಭಿಸಿದೆ.
ಕಳೆದ 2 ವರ್ಷಗಳ ಹಿಂದೆಯೇ ಪರೀಕ್ಷಾ ಅಕ್ರಮ ತಡೆಗಟ್ಟಲು ಮುಖಚರ್ಯೆ (ೇಷಿಯಲ್ ರೆಕಾಗ್‌ನೈಜೇಷನ್) ತಂತ್ರಜ್ಞಾನವನ್ನು ಅಳವಡಿಸಲು ಚರ್ಚಿಸಲಾಗಿತ್ತು. ಆದರೆ, ಇಲ್ಲಿಯವರೆಗೂ ಅನುಷ್ಠಾನ ಸಾಧ್ಯವಾಗಿರಲಿಲ್ಲ. ಈಗ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸುತ್ತಿರುವುದರಿಂದ ಸಂಪೂರ್ಣವಾಗಿ ಉನ್ನತೀಕರಿಸಲಾಗುತ್ತಿದೆ ಎಂದು ವಿವಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ತಂತ್ರಜ್ಞಾನದಿಂದ ಪರೀಕ್ಷಾ ಕೇಂದ್ರಕ್ಕೆ ಬದಲಿ ಅಭ್ಯರ್ಥಿ ಹಾಜರಾದರೆ, ಸಿಗ್ನಲ್‌ಗಳ ಮೂಲಕ ಅಲರ್ಟ್ ಸಿಗಲಿದೆ. ಇದರಿಂದ ಸಂಬಂಧಪಟ್ಟ ಅಭ್ಯರ್ಥಿಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸಹಕಾರಿಯಾಗಲಿದೆ ಎನ್ನುತ್ತಾರೆ.
ಈ ಕುರಿತು ‘ವಿಜಯವಾಣಿ’ಯೊಂದಿಗೆ ಮಾತನಾಡಿದ ವಿವಿ ಕುಲಪತಿ ಡಾ. ಎಂ.ಕೆ. ರಮೇಶ್, ಇಲ್ಲಿಯವರೆಗೂ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಭ್ಯರ್ಥಿಗಳ ಚಲನವಲನಗಳು ತಿಳಿಯುತ್ತಿದ್ದವು. ಆದರೆ, ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳು ಸಣ್ಣ ದನಿಯಲ್ಲಿ ಮಾತನಾಡಿಕೊಂಡು ನಕಲು ಮಾಡಿದರೆ ತಿಳಿಯುತ್ತಿರಲಿಲ್ಲ. ಎಐ ತಂತ್ರಜ್ಞಾನ ಅಳವಡಿಕೆಯಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಪರೀಕ್ಷಾ ಸುಧಾರಣೆ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಅಭ್ಯರ್ಥಿಯು ಪರೀಕ್ಷಾ ಕೇಂದ್ರದ ಒಳಗೆ ಮಾತ್ರವಲ್ಲದೆ, ವೈದ್ಯಕೀಯ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳಾದ ಬ್ಲುಟೂತ್‌ನಲ್ಲಿ ಪರೀಕ್ಷಾ ಕೇಂದ್ರದ ಹೊರಗಿರುವವರ ಜತೆಗೆ ಮಾತನಾಡಿದರೂ ಸಂಭಾಷಣೆಯ ದನಿಯು ರಿಕಾರ್ಡ್ ಆಗಲಿದೆ. ಇದರಿಂದ ವಿದ್ಯಾರ್ಥಿಯ ನಿಖರವಾಗಿ ನಕಲು ಮಾಡಿರುವುದನ್ನು ಪತ್ತೆ ಹಚ್ಚಬಹುದಾಗಿದೆ ಎಂದು ತಿಳಿಸಿದರು.
ಡಿಸೆಂಬರ್‌ನಲ್ಲಿ ಜಾರಿ:
ಮುಂದಿನ ಡಿಸೆಂಬರ್‌ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಮೊದಲ ಬಾರಿಗೆ ನೂತನ ತಂತ್ರಜ್ಞಾನ ಜಾರಿಯಾಗಲಿದೆ. ಇದು ಆರ್‌ಜಿಯುಎಚ್‌ಎಸ್ ವ್ಯಾಪ್ತಿಯಲ್ಲಿರುವ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳಿಗೂ ಅನ್ವಯವಾಗಲಿದೆ. ಪ್ರತಿ ವರ್ಷ ಕನಿಷ್ಠ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬುದು ವಿವಿ ಉದ್ದೇಶವಾಗಿದೆ. ಬದಲಾದ ಕಾಲಘಟ್ಟದಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಕೂಡ ಅಗತ್ಯವೆನ್ನುತ್ತಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ಮತ್ತು ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಗೊಳಿಸಲಾಗುತ್ತಿದೆ.– ಡಾ.ಎಂ.ಕೆ. ರಮೇಶ್, ಆರ್‌ಜಿಯುಎಚ್‌ಎಸ್ ಕುಲಪತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 9 =
Remember me
