ಶಿವಮೊಗ್ಗ:ನಿನ್ನೆ ತೀರ್ಥಹಳ್ಳಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಗುಡುಗಿದ್ದ ಆರಗ ಜ್ಞಾನೇಂದ್ರ, AICC ಅಧ್ಯಕ್ಷರ ಮೈಬಣ್ಣದ ಕುರಿತಾಗಿ ಕಾಮೆಂಟ್ ಮಾಡಿದ್ದು ವಿವಾದ ಸೃಷ್ಟಿಸಿದೆ.
ಇದನ್ನೂ ಓದಿ:ಮರ- ಗಿಡದ ನೆರಳು ಗೊತ್ತಿಲ್ಲ, ಸುಟ್ಟು ಕರಕಲಾಗಿರ್ತಾರೆ…ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ: ಆರಗ ಜ್ಞಾನೇಂದ್ರ ವ್ಯಂಗ್ಯ
ಪ್ರತಿಭಟನಾ ನಿರತ ಆರಗ ಜ್ಞಾನೇಂದ್ರ, “ಎಲ್ಲಿ ಫಾರೆಸ್ಟ್ ಇಲ್ಲವೋ ಅಲ್ಲಿಯವರು ಅರಣ್ಯ ಸಚಿವರಾಗಿದ್ದಾರೆ. ಅವರು ಸುಟ್ಟು ಕರಕಲಾಗಿರುತ್ತಾರೆ. ಅವರ ಬಣ್ಣವನ್ನು ನೋಡಿದರೆ ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ್ ಖಂಡ್ರೆ ಅವರನ್ನು ನೋಡಿದರೆ ಸುಟ್ಟು ಕರಕಲಾಗಿದ್ದು ಗೊತ್ತಾಗುತ್ತದೆ. ಪಾಪ ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ” ಎಂದು ಆರಗ ಜ್ಞಾನೇಂದ್ರ ಅವಹೇಳನ ಮಾಡಿದ್ದರು.
ಇದನ್ನೂ ಓದಿ:AI ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಸರ್ಕಾರ ಬದ್ಧವಾಗಿದೆ: ಪ್ರಿಯಾಂಕ್ ಖರ್ಗೆ
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗ್ರೆಸ್, “ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿ ತೋರಿಸಿದ್ದಾರೆ. ಮೈಬಣ್ಣದ ಬಗ್ಗೆ ಅವಹೇಳನ ಮಾಡುವ ಮೂಲಕ ಕೇವಲ ಖರ್ಗೆಯವರನ್ನಲ್ಲದೇ, ಮೂಲ ನಿವಾಸಿ ದಲಿತರಿಗೆ ಅವಮಾನ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮೈಕ್​ ಆಫ್​ ಮಾಡಿದ ಪ್ರಕರಣ; ನನ್ನ ಗೌರವಕ್ಕೆ ಧಕ್ಕೆಯಾಗಿದೆ ಎಂದ ಮಲ್ಲಿಕಾರ್ಜುನ ಖರ್ಗೆ
ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದಲ್ಲಿ ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ಆಗ್ರಹ ಮಾಡಿದ್ದು ಅದರೊಂದಿಗೆ, ಆರಗ ಜ್ಞಾನೇಂದ್ರ ಕೂಡಲೇ ಮಲ್ಲಿಕಾರ್ಜುನ ಖರ್ಗೆ ಹಾಗೂ ದಲಿತರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ@JnanendraAragaಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ.ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ…— Karnataka Congress (@INCKarnataka)August 2, 2023
ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ@JnanendraAragaಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ.ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
