ಬೆಂಗಳೂರು:ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಸ್ಥ ಸುರಕ್ಷ ಯೋಜನೆ ಅಡಿಯಲ್ಲಿ ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಪ್ರಾರಂಭಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮೇಲ್ಮನೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಜೆಡಿಎಸ್‌ನ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿ, 200 ಎಕರೆ ಭೂಮಿ, ಸಾರಿಗೆ ಸಂಪರ್ಕ, ನೀರು, ವಿದ್ಯುತ್ ಹಾಗೂ ಇತರೆ ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದರು.ಕೇಂದ್ರದಿಂದ ಯಾವುದೇ ನೆರವು ಕೊಡುತ್ತಿಲ್ಲ ಎಂದು ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ಬಿಜೆಪಿ ಕಡೆಗೆ ಕೈ ತೋರಿಸಿ ಆಕ್ಷೇಪಿಸಿದ್ದು ಕೋಲಾಹಲಕ್ಕೆ ಕಾರಣವಾಯಿತು.ನಾವು ಸಹಕಾರ ನೀಡುತ್ತೇವೆ. ನೀವು ಬಳಸಿಕೊಳ್ಳುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಏರು ಧ್ವನಿಯಲ್ಲಿ ಹೇಳಿದಾಗ ಅದಕ್ಕೆ ಕಾಂಗ್ರೆಸ್ ಸದಸ್ಯರು ನಿಮ್ಮ ಅಸಹಾಕಾರವೇ ಹೆಚ್ಚಾಗಿದೆ ಎಂದು ತಿರುಗೇಟು ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + sixteen =
Remember me
