ಬೆಂಗಳೂರು:ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡಿರುವ ಶೇಖ್ ಫಾಝಿಲ್​, ಕ್ಯಾಸಿನೋ ಪಾರ್ಟಿಗೆ ಸೆಲೆಬ್ರಿಟಿಗಳ ಕೈಲಿ ಇತರರನ್ನು ಇನ್ವೈಟ್​ ಮಾಡಿಸುತ್ತಿದ್ದ. ಈ ಪಾರ್ಟಿಗೆ ಬರುವಂತೆ ಸ್ಯಾಂಡಲ್​ವುಡ್​ ನಟಿ ಐಂದ್ರಿತಾ ರೇ ಕೂಡ ಪ್ರಮೋಟ್​ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್​ ಆಗಿದೆ.
ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಶೇಖ್​ ಫಾಝಿಲ್​ ಶಾಸಕ ಜಮೀರ್​ ಅಹ್ಮದ್​ರ ಆಪ್ತ, ಡ್ರಗ್ಸ್ ಕೇಸ್​ನ ಪ್ರಮುಖ ಆರೋಪಿ ಕೂಡ. ಫಾಝಿಲ್​ ಆಯೋಜಿಸುತ್ತಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಪಾಲ್ಗೊಳ್ಳುವಂತೆ ಚಿತ್ರನಟಿಯರಿಂದ ಮಾತನಾಡಿಸಿ ರಾಜಕಾರಣಿಗಳು ಮತ್ತು ಗಣ್ಯರ ಮಕ್ಕಳಿಗೆ ಆಹ್ವಾನ ನೀಡುತ್ತಿದ್ದ. ಇದೇ ರೀತಿ ಕನ್ನಡದ ‘ಮನಸಾರೆ’ ಬೆಡಗಿ ಐಂದ್ರಿತಾ ರೇ ಮೂಲಕವೂ ‘ಕೊಲೊಂಬೋಗೆ ನೀವೂ ಬನ್ನಿ, ನಾನು ಬರ್ತೀನಿ’ ಎಂದು ವಿಡಿಯೋ ಸಂದೇಶ ಮಾಡಿಸಿದ್ದ. ಈ ಕುರಿತು ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ಐಂದ್ರಿತಾ ರೇ, ‘ನನಗೂ ಶೇಖ್​ ಫಾಝಿಲ್​ಗೂ ಸಂಬಂಧವಿಲ್ಲ’ ಎಂದಿದ್ದಾರೆ.
ಇದನ್ನೂ ಓದಿರಿರಾಗಿಣಿ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ಮುಖಂಡ ಸಿಸಿಬಿ ವಶಕ್ಕೆ
‘ಫಾಝಿಲ್​ನ ಕ್ಯಾಸಿನೋ ಪಾರ್ಟಿಗೆ ಆಹ್ವಾನಿಸಿದ್ದ ವಿಡಿಯೋ ಕುರಿತು ಮಾತನಾಡಿದ ಐಂದ್ರಿತಾ ರೇ, ‘ಅದು ಮೂರು ವರ್ಷಗಳ ಹಿಂದಿನ ವಿಡಿಯೋ. ಸಿನಿಮಾ ಪ್ರಮೋಷನ್​ಗಾಗಿ ಶ್ರೀಲಂಕಾಗೆ ಹೋಗಿದ್ದೆ. ಸುಮಾರು-ನಟ-ನಟಿಯರು ಹೋಗಿದ್ದಾರೆ. ಸೆಲೆಬ್ರಿಟಿ ಆಗಿರೋದರಿಂದ ಪಾರ್ಟಿ ಬಗ್ಗೆ ಮಾತನಾಡಿಸಿದ್ದರು. ಆಗ ಫಾಝಿಲ್​ ಬಗ್ಗೆ ನನಗೇನೂ ಗೊತ್ತಿರಲಿಲ್ಲ. ನನಗೂ ಅವರಿಗೂ ಸಂಬಂಧವಿಲ್ಲ. ಡ್ರಗ್ಸ್​ ದಂಧೆ ಬಗ್ಗೆ ನನಗೇನೂ ಗೊತ್ತಿಲ್ಲ’ ಎಂದರು.
https://www.facebook.com/DighvijayNews/videos/899237143933679
ಜಮೀರ್ ಹೇಳಿಕೆ ಬೆನ್ನಲ್ಲೇ ಶ್ರೀಲಂಕಾ ಪ್ರವಾಸದ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ!

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
