ಬೆಂಗಳೂರು:ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋತ್​ ತಡವಾಗಿ ಆಗಮಿಸಿದರು ಎಂಬ ಕಾರಣಕ್ಕೆ ಅವರನ್ನು ಬಿಟ್ಟು ಏರ್​ಏಷ್ಯಾ ವಿಮಾನವು​ ಹಾರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗವರ್ನರ್​ ಆಫೀಸ್​ ಅಧಿಕಾರಿಗಳು ಸಂಸ್ಥೆಯ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಜ್ಯಪಾಲರ ಕಚೇರಿ ಅಧಿಕಾರಿಗಳು ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಫ್ರೋಟೋಕಾಲ್​ ಉಲ್ಲಂಘನೆ ಎಂದು ದೂರು ದಾಖಲಿಸಿದ್ದಾರೆ.
ಗುರುವಾರ ಮಧ್ಯಾಹ್ನ 2 ಘಂಟೆಗೆ ರಾಜ್ಯಪಾಲರು ಬೆಂಗಳೂರಿನಿಂದ ಹೈದರಾಬಾದ್​ಗೆ ತೆರಳಬೇಕಿತ್ತು. ರಾಜ್ಯಪಾಲರನ್ನು ವಿಐಪಿ ಲಾಂಜ್​ನಲ್ಲಿ ಕುಳ್ಳಿರಿಸಿದ್ದ ಅಧಿಕಾರಿಗಳು ಅವರ ಲಗೇಜ್​ಅನ್ನು ಏರ್​ಏಷ್ಯಾ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಲಗ್ಗೇಜ್​ ತೆಗೆದುಕೊಂಡ ಸಿಬ್ಬಂದಿ ಅವರು ಬರುವುದು ಒಂದು ನಿಮಿಷ ತಡವಾಗಿದ್ದಕ್ಕೆ ಬಿಟ್ಟು ಹೊರಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು ರಾಜ್ಯಪಾಲರು ಮಧ್ಯಾಹ್ನ 1:30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಫ್ರೋಟೋಕಾಲ್​ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅವರಿಗೆ ವಿಮಾನ ತಪ್ಪಿದೆ. ನಂತರ ಬದಲಿ ವಿಮಾನದಲ್ಲಿ ಅವರು ಹೈದರಾಬಾದಿಗೆ ಪ್ರಯಾಣ ಬೆಳೆಸಿದ್ದರು.
ಇದನ್ನೂ ಓದಿ:ನ್ಯಾಯಕ್ಕಾಗಿ ಟ್ವೀಟ್​ ಮಾಡಿದ್ರೆ ಬಂಧಿಸ್ತೀರಾ ಹಾಗಿದ್ರೆ ವಿಡಿಯೋ ಮಾಡಿದವರನ್ನು ಯಾಕೆ ಅರೆಸ್ಟ್​ ಮಾಡಿಲ್ಲ: ರವಿಕುಮಾರ್​
ವಿಐಪಿ ಲಾಂಜ್​ನಲ್ಲಿ ರಾಜ್ಯಪಾಲರನ್ನು ಕುಳ್ಳಿರಿಸಿ ವಿಮಾನ ನಿಲ್ದಾಣದವರ ಜೊತೆ ಮಾತುಕತೆ ನಡೆಸುವಲ್ಲಿ ಎಡವಿದ್ದು, ಈ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯಪಾಲರನ್ನು ಬಿಟ್ಟು ಹಾರಾಟ ನಡೆಸಿರುವುದಕ್ಕೆ ವಿಷಾದ ವ್ಯಕ್ತಪಡಿಸಿರುವ ಏರ್​ಏಷ್ಯಾ ವಿಮಾನ ಸಂಸ್ಥೆಯು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಬಂಧ ನಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ರಾಜ್ಯಪಾಲರ ಕಚೇರಿಯ ಸಿಬ್ಬಂದಿ ಜೊತೆಗೆ ಸಂಪರ್ಕದಲ್ಲಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಏರ್​ಏಷ್ಯಾ ಸಂಸ್ಥೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
