ಬೆಂಗಳೂರು:ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತೊಮ್ಮೆ ಹೈವೋಲ್ಟೇಜ್‌ ಆಗಿ ರಾಜ್ಯದ ಗಮನ ಸೆಳೆಯಲಿದೆ. ಈ ಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ.
ಇದನ್ನೂ ಓದಿ:ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ಅವರು, ತಮ್ಮ ಎಕ್ಸ್ ಖಾತೆ ಮೂಲಕ ಸ್ಪಷ್ಟನೆ ನೀಡಿದ್ದು, ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.
— DK Shivakumar (@DKShivakumar)June 27, 2024

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಶಾಸಕ ಸ್ಥಾನದಿಂದ ತೆರವಾದ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಜಿಲ್ಲೆಯ ಚನ್ನಪಟ್ಟಣ (ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ತೆರವು), ಬಳ್ಳಾರಿ ಜಿಲ್ಲೆಯ ಸಂಡೂರು (ಸಂಸದ ತುಕಾರಾಂ ಅವರಿಂದ ತೆರವು) ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ (ಮಾಜಿ ಸಿಎಂ ಹಾಗೂ ಹಾಲಿ ಸಂಸದ ಬಸವರಾಜ ಬೊಮಮಾಯಿ ಅವರಿಂದ ತೆರವು) ಈ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ಕಾವು ಹೆಚ್ಚಾಗಿದೆ. ಅದರಲ್ಲಿಯೂ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆ ಕಣವಾಗಿ ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ. ಶಿವಕುಮಾರ್ ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಒಮ್ಮೆ ದೇವರ ದರ್ಶನಕ್ಕೆ, ಮತ್ತೊಮ್ಮೆ ರಾಜಕೀಯ ನಾಯಕರ ಭೇಟಿಗೆ ಹಾಗೂ ಮತ್ತೊಮ್ಮೆ ಚನ್ನಪಟ್ಟಣದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸೇರಿ ಮೂರು ಬಾರಿ ಹೋಗಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ಸುಳಿವನ್ನು ಕೊಟ್ಟಿದ್ದರು. ಆದರೆ, ಈಗ ಚನ್ನಪಟ್ಟಣದಲ್ಲಿ ಡಿ.ಕೆಶಿ ಅವರ ಸ್ಪರ್ಧೆಯ ಬದಲಾಗಿ ಅವರ ಮಗಳು ಐಶ್ವರ್ಯಾ ಅವರನ್ನು ಸ್ಪರ್ಧೆಗೆ ಇಳಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು ಈ ಸಂಬಂಧ ಊಹಾಪೋಗಳಿಗೆ ತೆರೆ ಎಳೆದಿದ್ದಾರೆ.
ಉಡುಪಿಯಲ್ಲಿ ಗಗನಸಖಿ ಸೇರಿ ನಾಲ್ವರ ಕೊಲೆ ಕೇಸ್:​ ಆರೋಪಿ ಜಾಮೀನು ಅರ್ಜಿ ತಿರಸ್ಕೃತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 2 =
Remember me
