ನವದೆಹಲಿ:ಕೇರಳದ ಮಾಜಿ ಮುಖ್ಯಮಂತ್ರಿ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿಷೇಧವಿದ್ದರೂ ಕೇರಳ ಕಾಂಗ್ರೆಸ್‌ನ ವಿವಿಧ ಘಟಕಗಳು ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಘೋಷಿಸಿವೆ. ಇದರ ನಡುವೆಯೇ ಆಂಟನಿ ಪುತ್ರ ರಾಜೀನಾಮೆ ನೀಡಿರುವುದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
2002ರಲ್ಲಿ ಗುಜರಾತ್​ನಲ್ಲಿ ಗೋಧ್ರಾ ಹತ್ಯಾಕಾಂಡದ ನಂತರ ರಾಜ್ಯಾದ್ಯಂತ ನಡೆದ ಹಿಂಸಾಚಾರ ಕುರಿತ 59 ನಿಮಿಷದ ಡಾಕ್ಯುಮೆಂಟರಿ ದೇಶದಲ್ಲಿ ವಿವಾದದ ಕಿಡಿಹೊತ್ತಿಸಿದೆ. ಗೋಧ್ರಾ ಹತ್ಯಾಕಾಂಡದ ವೇಳೆ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪಾತ್ರದತ್ತ ಈ ಡಾಕ್ಯುಮೆಂಟರಿ ಬೆರಳು ಮಾಡಿದೆ. ಈ ಸಾಕ್ಷ್ಯಚಿತ್ರವನ್ನ ಆ್ಯಂಟನಿ ಅವರ ಪುತ್ರ ಅನಿಲ್​ ನಿನ್ನೆ(ಮಂಗಳವಾರ) ವಿರೋಧಿಸಿದ್ದರು. ಮರುದಿನವೇ ಕಾಂಗ್ರೆಸ್​ ಪಕ್ಷಕ್ಕೆ ಅನಿಲ್​ ರಾಜೀನಾಮೆ ನೀಡಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವಿಟರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
‘ನಾನು ಕಾಂಗ್ರೆಸ್​ನಲ್ಲಿ ನಾನು ವಹಿಸಿಕೊಂಡಿದ್ದ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ. ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರವನ್ನ ವಿರೋಧಿಸಿ ಬಿಜೆಪಿ ಪರ ನಾನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದೆ. ಇದನ್ನು ಡಿಲೀಟ್​ ಮಾಡುವಂತೆ ಕಾಂಗ್ರೆಸ್​ ನನಗೆ ಹೇಳಿದರು. ಇದನ್ನು ನಾನು ನಿರಾಕರಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲವೇ? ಇದೇ ಕಾರಣಕ್ಕೆ ನಾನು ಕಾಂಗ್ರೆಸ್​ನ ನನ್ನೆಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ’ ಎಂದು ಟ್ವೀಟ್​ ಮಾಡಿದ್ದಾರೆ.
ವಿವಾದಾತ್ಮಕ ಡಾಕ್ಯುಮೆಂಟರಿ ‘ದಿ ಮೋದಿ ಕ್ವೆಶ್ಚನ್​’ನ ಲಿಂಕ್​ಗಳನ್ನು ಕೇಂದ್ರ ಸರ್ಕಾರ ಬ್ಲಾಕ್​ ಮಾಡಿ, ಭಾರತದಲ್ಲಿ ಇದರ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ.
ಮೋದಿ ಕುರಿತು ವಿವಾದಾತ್ಮಕ ಡಾಕ್ಯುಮೆಂಟರಿ ಪ್ರದರ್ಶನ: ಜೆಎನ್​ಯು ವಿವಿಯಲ್ಲಿ ಕಲ್ಲು ತೂರಾಟ

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + sixteen =
Remember me
