ನಾಗಪುರ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ವಿಕಾಸ ಶಿಬಿರವು ಸಂಘದ ಕಾರ್ಯಕರ್ತರಿಗೆ ರಾಷ್ಟ್ರೀಯ ಏಕಾತ್ಮತೆಯ ಅನುಭೂತಿ ನೀಡುತ್ತದೆ ಎಂದು ಸಂಘದ ಅಖಿಲ ಭಾರತೀಯ ಸೇವಾ ಪ್ರಮುಖ್ ಪರಾಗ್ ಅಭ್ಯಂಕರ್ ಅಭಿಪ್ರಾಯಿಸಿದ್ದಾರೆ. ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಡಾ. ಕೇಶವ ಬಲಿರಾಮ್ ಹೆಡಗೇವಾರ್ ಸ್ಮೃತಿಮಂದಿರದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ್ವಿತೀಯ ಕಾರ್ಯಕರ್ತ ವಿಕಾಸ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಘದ ಕಾರ್ಯಗಳಲ್ಲಿ ಪ್ರಶಿಕ್ಷಣ ವರ್ಗ ಅತ್ಯಂತ ಮಹತ್ವದ್ದಾಗಿದೆ. ಈ ಕಾರಣದಿಂದಾಗಿಯೇ ಸಂಘ ಕಾರ್ಯವನ್ನು ವೃದ್ಧಿಸುವ ದೃಷ್ಟಿಯಿಂದ ಪ್ರಾಂತೀಯ ಸ್ಥಳಗಳಲ್ಲಿಯೂ ಪ್ರಶಿಕ್ಷಣ ವರ್ಗಗಳನ್ನು ನಡೆಸಲು ಪ್ರಾರಂಭಿಸಲಾಯಿತು. ಕೊರೋನಾ ಸಮಯದಲ್ಲಿ ಬಿಟ್ಟು ಪ್ರಶಿಕ್ಷಣ ವರ್ಗ ನಿರಂತರವಾಗಿ ನಡೆದುಕೊಂಡು ಬಂದಿದೆ. ಹಾಗೆಯೇ ಸಮಯಕ್ಕೆ ಅನುಗುಣವಾಗಿ ಪ್ರಶಿಕ್ಷಣ ವರ್ಗದ ಅವಧಿ ಮತ್ತು ಪಠ್ಯಕ್ರಮದಲ್ಲಿ ಬದಲಾವಣೆಗಳೂ ಆಗಿವೆ. ಕಾರ್ಯಕರ್ತರ ಚಿಂತನೆ ಹೇಗಿರಬೇಕು, ಅವರ ಮುಂದಿರುವ ಸವಾಲುಗಳು ಯಾವುವು ಎಂಬುದನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡರಾದ ಇಕ್ಬಾಲ್ ಸಿಂಗ್, ಡಾ.ಕೃಷ್ಣ ಗೋಪಾಲ್ ಮುಕುಂದ ಸಿ.ಆರ್, ರಾಮದತ್ತ್ ಚಕ್ರಧರ್ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರಾದ್ಯಂತದಿಂದ 936 ಶಿಕ್ಷಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದು, ಕರ್ನಾಟಕದ 44 ಶಿಕ್ಷಾರ್ಥಿಗಳು ಪಾಲ್ಗೊಂಡಿದ್ದಾರೆ. ಮೇ 16 ರಿಂದ ಆರಂಭವಾಗಿರುವ ಶಿಬಿರವು ಜೂ.11ರವರೆಗೆ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
