ಕಲಬುರಗಿ: ಕನ್ನಡಕ್ಕೆ ಮೊಟ್ಟ ಮೊದಲ ಕೃತಿ ಕವಿರಾಜ ಮಾರ್ಗ ನೀಡಿದ ಸೂಫಿ-ಸಂತರ ನಾಡು ಕಲಬುರಗಿಯಲ್ಲಿ ಮೂರು ದಶಕದ ಬಳಿಕ ಫೆಬ್ರವರಿ 5ರಿಂದ ಮೂರು ದಿನ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಮಾಲಾಜಿ ಬಿಡುಗಡೆಗೊಳಿಸಿದರು.
ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ್, ಎಂ.ವೈ. ಪಾಟೀಲ್, ವಿಧಾನ್ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ನಗರ ಪೊಲೀಸ್ ಅಯುಕ್ತ ಎಂ.ಎನ್. ನಾಗರಾಜ, ಜಿಲ್ಲಾಧಿಕಾರಿ ಶರತ್ ಬಿ., ಡಿಸಿಪಿ ಕಿಶೋರಬಾಬು, ಜಿಪಂ ಸಿಇಒ ಡಾ.ಪಿ. ರಾಜಾ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ವಾನತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಇತರರಿದ್ದರು.
ಲಾಂಛನದಲ್ಲಿ ಏನೇನಿದೆ?:ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೊದಲು ದರ್ಶನ ನೀಡುವ ಜಿಲ್ಲೆ ಎಂದರೆ ಕಲಬುರಗಿ. ಸಮ್ಮೇಳನದ ಲಾಂಛನದಲ್ಲಿ ಈ ಜಿಲ್ಲೆಯ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಶ್ರೀವಿಜಯ ಬರೆದ `ಕವಿರಾಜ ಮಾರ್ಗ’ ಎಂಬ ಆದರ್ಶ ಗ್ರಂಥ ಮತ್ತು ಕವಿಯು ಕಾವ್ಯ ರಚನೆಯಲ್ಲಿ ತೊಡಗಿದ್ದನ್ನು ಬಳಸಲಾಗಿದೆ. ಸನ್ನತಿ, ನಾಗಾವಿ, ಮರತೂರ ಮೊದಲಾದ ಕಡೆ ಪ್ರಾಚೀನ ಶಾಸನಗಳು ಇರುವುದರಿಂದ ಸಾಂಕೇತಿಕವಾಗಿ ಒಂದು ಶಾಸನ, ಸೌಹಾರ್ದ-ಸಹಿಷ್ಣುತೆಗೆ ಹೆಸರುವಾಸಿಯಾದ ಹಜರತ್ ಖ್ವಾಜಾ ಬಂದಾ ನವಾಜ್ ದರ್ಗಾ, ಶ್ರೀ ಶರಣಬಸವೇಶ್ವರ ಐತಿಹಾಸಿಕ ಭವ್ಯ ದೇವಾಲಯ, ಕಲಬುರಗಿ ಕೋಟೆ, ಚರ್ಚ್ ಹಾಗೂ ಬುದ್ಧ ವಿಹಾರವನ್ನು ಸಹ ಲಾಂಛನದಲ್ಲಿ ಬಳಸಲಾಗಿದೆ.
ಕನ್ನಡ ನಾಡಿನಲ್ಲಿ ಅಶೋಕನ ಪೂರ್ವ ಕಾಲದಲ್ಲಿ ಬೌದ್ಧ ಧರ್ಮ ಇತ್ತು ಎಂಬುದಕ್ಕೆ ಸಾಕ್ಷ್ಯಾಧಾರ ಸನ್ನತಿಯಲ್ಲಿ ದೊರತಿವೆ. ಹೀಗಾಗಿ ಸನ್ನತಿ ಶಿಲ್ಪಗಳನ್ನು, ಜನಪದ ಹಾಡುಗಾರ ಮತ್ತು ತತ್ವಪದಕಾರರ ಸಂಕೇತವಾಗಿ ಏಕತಾರಿ ಮತ್ತು ದಮ್ಮಡಿ ಹಾಗೂ ಪ್ರಾಚೀನ ಕವಿಗಳ ಮತ್ತು ವಚನಕಾರರ ಸಾಹಿತ್ಯ ರಚನೆ ಸಂಕೇತವಾಗಿ ತಾಳೆಗರಿ ಕಟ್ಟು ಬಳಸಲಾಗಿದೆ.
ಕಲಬುರಗಿ ಜಿಲ್ಲೆ ತೊಗರಿ ಕಣಜವಾಗಿದ್ದರಿಂದ ತೊಗರಿ ಬೆಳೆ ಚಿತ್ರ ಬಳಸಿದ್ದು, ಲಾಂಛನದ ಮೇಲ್ಭಾಗದಲ್ಲಿ ಕನ್ನಡಾಂಬೆ ಭಾವಚಿತ್ರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಚಿಹ್ನೆ, ಧ್ವಜ ಮತ್ತು ಸಂಭ್ರಮದ ಸೂಚಕವಾಗಿ ಕಲಾತ್ಮಕವಾದ ಜನಪದ ಛತ್ರಿ ಬಳಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − fifteen =
Remember me
